18.06.2025ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸ್ವಲ್ಪ ಮಟ್ಟಿಗೆ ಮಳೆಯ ತೀವ್ರತೆ ಕಡಿಮೆಯಾಗುವ ಮುನ್ಸೂಚನೆ ಇದೆ. ಆದರೆ ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜೂನ್ 18 ರಿಂದ ಮುಂದಿನ 10 ದಿನಗಳವರೆಗೂ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ಜೂನ್ 19 ರಿಂದ 21 ರ ತನಕ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಸಣ್ಣ ಅವಕಾಶ ಸಿಗಬಹುದು.
ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಕಡಿಮೆಯಾದರೂ, ಬಿಟ್ಟು ಬಿಟ್ಟು ಜೋರು ಮಳೆಯ ಮುನ್ಸೂಚನೆ ಇದೆ. ( ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಜಾಸ್ತಿ ಇರಬಹುದು). ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಾಮಾನ್ಯ ಹಾಗೂ ಉಳಿದ ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜೂನ್ 18 ರಿಂದ ಮತ್ತಷ್ಟು ಕಡಿಮೆಯಾದರೂ ಜೂನ್ 22 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜೂನ್ 18 ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡ, ಬಿಸಿಲಿನ ವಾತಾವರಣದ ಲಕ್ಷಣಗಳಿವೆ.
ಅರಬ್ಬಿ ಸಮುದ್ರದ ಗುಜರಾತ್ ಕರಾವಳಿಯಲ್ಲಿ ಹಾಗೂ ಬಂಗಾಳಕೊಲ್ಲಿಯ ಬಾಂಗ್ಲಾ ಕರಾವಳಿಯಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆಯು ದುರ್ಬಲಗೊಂಡರೂ ಸಂಪೂರ್ಣ ಶಿಥಿಲಗೊಂಡಿಲ್ಲ. ಸಂಪೂರ್ಣ ಶಿಥಿಲಗೊಳ್ಳುವ ತನಕ ಮುಂಗಾರು ಚುರುಕಾಗಿರಬಹುದು.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…