Advertisement
ವೆದರ್ ಮಿರರ್

ಹವಾಮಾನ ವರದಿ | 17-06-2025 | ಮಳೆ ತೀವ್ರತೆ ಕಡಿಮೆ ನಿರೀಕ್ಷೆ | ಜೂ.18 ರಿಂದ ಸಾಮಾನ್ಯ ಮಳೆ ಸಾಧ್ಯತೆ

Share

18.06.2025ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸ್ವಲ್ಪ ಮಟ್ಟಿಗೆ ಮಳೆಯ ತೀವ್ರತೆ ಕಡಿಮೆಯಾಗುವ ಮುನ್ಸೂಚನೆ ಇದೆ. ಆದರೆ ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜೂನ್ 18 ರಿಂದ ಮುಂದಿನ 10 ದಿನಗಳವರೆಗೂ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ಜೂನ್ 19 ರಿಂದ 21 ರ ತನಕ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಸಣ್ಣ ಅವಕಾಶ ಸಿಗಬಹುದು.

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಕಡಿಮೆಯಾದರೂ, ಬಿಟ್ಟು ಬಿಟ್ಟು ಜೋರು ಮಳೆಯ ಮುನ್ಸೂಚನೆ ಇದೆ. ( ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಜಾಸ್ತಿ ಇರಬಹುದು). ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಾಮಾನ್ಯ ಹಾಗೂ ಉಳಿದ ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜೂನ್ 18 ರಿಂದ ಮತ್ತಷ್ಟು ಕಡಿಮೆಯಾದರೂ ಜೂನ್ 22 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.  ಈಗಿನಂತೆ ಜೂನ್ 18 ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡ, ಬಿಸಿಲಿನ ವಾತಾವರಣದ ಲಕ್ಷಣಗಳಿವೆ.

ಅರಬ್ಬಿ ಸಮುದ್ರದ ಗುಜರಾತ್ ಕರಾವಳಿಯಲ್ಲಿ ಹಾಗೂ ಬಂಗಾಳಕೊಲ್ಲಿಯ ಬಾಂಗ್ಲಾ ಕರಾವಳಿಯಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆಯು ದುರ್ಬಲಗೊಂಡರೂ ಸಂಪೂರ್ಣ ಶಿಥಿಲಗೊಂಡಿಲ್ಲ. ಸಂಪೂರ್ಣ ಶಿಥಿಲಗೊಳ್ಳುವ ತನಕ ಮುಂಗಾರು ಚುರುಕಾಗಿರಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮೊಬೈಲ್ ಟವರ್‌ಗಳ ನಡುವೆ ಹಕ್ಕಿಗಳ ಕಲರವ – ಬಸ್‌ ನಿಲ್ದಾಣದ ಬೇವಿನ ಮರದಲ್ಲಿ ನೂರಾರು ಹಕ್ಕಿಗಳ ವಾಸ

ಕೊಪ್ಪಳ ಜಿಲ್ಲೆಯ ತಳಕಲ್‌ ಸರ್ಕಾರಿ ಬಸ್‌ ನಿಲ್ದಾಣದ ಎರಡು ಮರಗಳಲ್ಲಿ ನೂರಾರು ಹಕ್ಕಿಗಳು…

12 hours ago

ಮಳೆ ಕೈಕೊಟ್ಟರೂ ಬಗ್ಗದ ಛಲ – ಸೂರ್ಯಕಾಂತಿ ಬೆಳೆದು ಮಾದರಿಯಾದ ದಿವ್ಯಾಂಗ ರೈತ ಮಹಿಳೆ

ಕೊಪ್ಪಳ ಜಿಲ್ಲೆಯ ದ್ಯಾಂಪುರ ಗ್ರಾಮದ ದಿವ್ಯಾಂಗ ರೈತ ಮಹಿಳೆ ಅನ್ನಪೂರ್ಣೇಶ್ವರಿ, ಮುಂಗಾರು ಮಳೆಯಿಂದ…

12 hours ago

ನವೆಂಬರ್‌ 5ರಿಂದ ರಾಜ್ಯದಲ್ಲಿ ಬಸ್‌ ಪ್ರಯಾಣ ದರ ಏರಿಕೆ

ನವೆಂಬರ್‌ 5ರಿಂದ ಕರ್ನಾಟಕದಲ್ಲಿ ರಾಜ್ಯ ಸಾರಿಗೆ ಸಂಸ್ಥೆಗಳ ಬಸ್‌ ಪ್ರಯಾಣ ದರ ಹೆಚ್ಚಳವಾಗಲಿದೆ…

12 hours ago

ರೈತರಿಗೆ ಕೃಷಿ ಯಂತ್ರೋಪಕರಣ ಸೌಲಭ್ಯ ಕಲ್ಪಿಸಲು ’ನೇಗಿಲಯೋಗಿ’ ಯೋಜನೆ ಜಾರಿ ಸಿದ್ಧತೆ

ಮೂರು ಎಕರೆ ಒಳಗಿನ ಜಮೀನು ಹೊಂದಿರುವ ರೈತರಿಗೆ ಉಳುಮೆ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ…

12 hours ago

ಭಾರತದ ರಬ್ಬರ್‌ ಮಾರುಕಟ್ಟೆಯಲ್ಲಿ ಐತಿಹಾಸಿಕ ದಾಖಲೆ – 300 ರೂಪಾಯಿ ಸನಿಹಕ್ಕೆ ರಬ್ಬರ್‌ ಮಾರುಕಟ್ಟೆ

ಭಾರತದ ರಬ್ಬರ್‌ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ ಆರ್‌ಎಸ್‌ಎಸ್‌–4 ದರ್ಜೆಯ ರಬ್ಬರ್‌ ಬೆಲೆ ಕೆ.ಜಿ.ಗೆ…

12 hours ago

ಹವಾಮಾನ ವರದಿ | 1.11.2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು | ನವೆಂಬರ್ 3ರಿಂದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ನಿರೀಕ್ಷೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಚುರುಕಾಗುವ ಲಕ್ಷಣಗಳು ಕಂಡುಬಂದಿವೆ. ಬಂಗಾಳಕೊಲ್ಲಿಯಲ್ಲಿ…

1 day ago