Advertisement
ವೆದರ್ ಮಿರರ್

ಹವಾಮಾನ ವರದಿ | 19-06-2025 | ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

20.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ, ದಿನದಲ್ಲಿ ಅಲ್ಲಲ್ಲಿ 2 ರಿಂದ 3 ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ ತಾಲೂಕು ಮಳೆ ಮತ್ತೂ ಕಡಿಮೆ ಇರಬಹುದು. (ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಗುಡುಗು ಸಾಧ್ಯತಯೂ ಇದೆ.) ಈಗಿನಂತೆ ಜೂನ್ 2 1ರ ತನಕ ಮಳೆಯ ಪ್ರಮಾಣ ಕಡಿಮೆ ಇದ್ದು, ನಂತರ ಸ್ವಲ್ಪ ಜಾಸ್ತಿಯಾಗುವ ಲಕ್ಷಣಗಳಿವೆ. ಆದರೂ ಭಾರಿ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಸಾಮಾನ್ಯ ಮಳೆ ಮುಂದುವರಿಯಬಹುದು.

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಮೋಡ ಹಾಗೂ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ದಿನದಲ್ಲಿ 2, 3 ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜೂನ್ 22ರಿಂದ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಲಕ್ಷಣಗಳಿದ್ದರೂ ಭಾರಿ ಮಳೆಯ ಸಾಧ್ಯತೆಗಳು ಗೋಚರಿಸುತ್ತಿಲ್ಲ.

ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಈಗಿನಂತೆ ಜೂನ್ 26ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಆರಂಭವಾಗುವ ಲಕ್ಷಣಗಳಿವೆ.

ಅರಬ್ಬಿ ಸಮುದ್ರದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದಂತಹ ತಿರುವಿಕೆಯು ಮಧ್ಯಪ್ರದೇಶದ ಉತ್ತರ ಭಾಗ ತಲುಪಿದ್ದು, ಅಲ್ಲೆ ಶಿಥಿಲಗೊಳ್ಳುವ ಲಕ್ಷಣಗಳಿವೆ. ಬಂಗಾಳಕೊಲ್ಲಿಯ ತಿರುಗುವಿಕೆಯು ಪಶ್ಚಿಮ ಬಂಗಾಳದಲ್ಲಿದ್ದು, ಜೂನ್ 21ರಂದು ಉತ್ತರ ಪ್ರದೇಶ ತನಕ ಸಾಗಿ ಶಿಥಿಲಗೊಳ್ಳುವ ಸಾಧ್ಯತೆಗಳಿವೆ. ಇದರ ಪರಿಣಾಮದಿಂದ ಇವತ್ತು ರಾಜ್ಯದ ಕರಾವಳಿ ಭಾಗಗಳಿಲ್ಲಿ ಮಳೆಯ ಪ್ರಮಾಣ ನಿರೀಕ್ಷೆಗಿಂತ ಸ್ವಲ್ಪ ಜಾಸ್ತಿ ಇರಬಹುದು .

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹಣದ ಆಕರ್ಷಣೆ ಮತ್ತು ಮೌಲ್ಯದ ಕುಸಿತ

ಮಾನವ ಸಮಾಜದಲ್ಲಿ ಹಣವು ಆವಶ್ಯಕತೆಯ ಆಧಾರಶಿಲೆ.  “ಅನ್ನಂ ನ ನಿತ್ಯಂ, ಧನಂ ನ…

44 minutes ago

ಹವಾಮಾನ ವರದಿ | 30-10-2025 | ನವೆಂಬರ್‌ ಮೊದಲ ವಾರದಿಂದ ಮತ್ತೆ ಗುಡುಗು ಸಹಿತ ಮಳೆ…?

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಂಡಿದ್ದು, ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಇನ್ನೂ 3…

1 day ago

ಶಾಲೆಯ ವಾರ್ಷಿಕೋತ್ಸವದಲ್ಲಿ ಕೃಷಿಕನಿಗೆ ಸನ್ಮಾನ… | ಕೃಷಿ ಬದುಕಿನ ಸಾಧನೆಯ ಪರಿಚಯಿಸುವ ಶಾಲೆ

ಶಾಲೆಯ ವಾರ್ಷಿಕೋತ್ಸವದಲ್ಲಿ ಕೃಷಿ ಸಾಧಕನಿಗೆ ಸನ್ಮಾನ. ಇಂತದೊಂದು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿರುವುದು ಕುಕ್ಕೆ…

1 day ago

ರಸಗೊಬ್ಬರ ಸಬ್ಸಿಡಿ 37,952 ಕೋಟಿ ರೂಪಾಯಿ

ಮಂಗಳವಾರದಂದು ನಡೆದ ಕೇಂದ್ರ ಸಚಿವ ಸಂಪುಟದಲ್ಲಿ ಹಿಂಗಾರು ಹಂಗಾಮಿನ ಬೆಳೆಗಳಿಗಾಗಿ ಒಟ್ಟು 37,952…

2 days ago

ಮಹಿಳೆಯರಿಗೆ ಸ್ವಉದ್ಯೋಗ | ಉಚಿತ ನಾಟಿ ಕೋಳಿಮರಿ ಯೋಜನೆಗೆ ಸರ್ಕಾರ ನಿರ್ಧಾರ

ಮಹಿಳೆಯರ ಜೀವನದಲ್ಲಿ ಆರ್ಥಿಕ ಬದಲಾವಣೆ ತರಲು ಹಾಗೂ ಸ್ವಾವಲಂಬನೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ…

2 days ago

ಒಂದು ಎಕರೆ ಬದನೆ ತೋಟ – 6 ಲಕ್ಷ ಆದಾಯ | ಯುವ ಕೃಷಿಕನ ಸಾಧನೆ

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದ ಅಶೋಕ ಮಾಸಾಳ ಅವರು ಜಮೀನಿನಲ್ಲಿ…

2 days ago