30.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ದಿನದಲ್ಲಿ 2, 3 ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ( ಗಾಳಿ ಹಾಗೂ ಅಲ್ಲಲ್ಲಿ ಗುಡುಗು ಸಾಧ್ಯತೆಯೂ ಇದೆ). ತೋಟಗಳಿಗೆ ಔಷಧಿ ಸಿಂಪಡಿಸಲು ನಾಳೆಯಿಂದ (ಜೂನ್ 30ರಿಂದ) ಅವಕಾಶ ಸಿಗಬಹುದು. ಈಗಿನಂತೆ ಜೂನ್ 30 ರಿಂದ ಜುಲೈ 2 ರ ತನಕ ಮಳೆಯ ಪ್ರಮಾಣ ಕಡಿಮೆ ಇರುವ ಸಾಧ್ಯತೆಗಳಿದ್ದು, ನಂತರ ಹೆಚ್ಚಾಗುವ ಸೂಚನೆಗಳಿದ್ದರೂ ಮತ್ತೆ 3 ದಿವಸಗಳಲ್ಲಿ ಕಡಿಮೆಯಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲೂ ಮಳೆ ಕಡಿಮೆಯಾಗಿದ್ದು, ದಿನದಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜೂನ್ 30 ರಿಂದ ಮಳೆಯ ಪ್ರಮಾಣ ಮತ್ತಷ್ಟು ಕಡಿಮೆಯಾಗುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಧಾರವಾಡ, ಉತ್ತರ ಬೆಳಗಾವಿ, ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಬಹುದು. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಮುನ್ಸೂಚೆನೆ ಇದೆ.ಈಗಿನಂತೆ ಜುಲೈ 3 ರಿಂದ 5 ರ ತನಕ ಉತ್ತರ ಹಾಗೂ ದಕ್ಷಿಣ ಒಳನಾಡು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ನಂತರ ಕಡಿಮೆಯಾಗುವ ಲಕ್ಷಣಗಳಿವೆ.
ತೆಂಗು ಬೆಳೆ ಬಾಧಿಸುವ ಕೀಟಗಳನ್ನು ಹತೋಟಿಗೆ ತರಲು ಕ್ರಮವಹಿಸುವುದಾಗಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ…
ಕೋಲಾರ ಜಿಲ್ಲಾ ಹಾಲು ಒಕ್ಕೂಟದಲ್ಲಿ ಪ್ರತಿದಿನ 10 ಲಕ್ಷಕ್ಕೆ ಏರಿಸುವುದು ನೂತನ ಆಡಳಿತ…
ಪ್ರಣಾಮ್ ಎಂ ಪಿ, ಮಠದಗದ್ದೆ, 4 ನೇ ತರಗತಿ, ಕೆಪಿಎಸ್ ಶಾಲೆ, ಬೇಗಾರ್, …
ನಿರ್ವಿ ಜಿ ಎಂ, 2 ನೇ ತರಗತಿ, ಸರ್ಕಾರಿ ಶಾಲೆ , ಬಳ್ಪ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
07.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…