ಹವಾಮಾನ ವರದಿ | 03-07-2025 | ಇಂದು ಸಾಮಾನ್ಯ ಮಳೆ | ಜು.6 ರ ನಂತರ ಮಲೆನಾಡು-ಕರಾವಳಿ ಹವಾಮಾನ ಹೇಗೆ ? | ಜು.4 ರಿಂದ ಒಳನಾಡು ವಾತಾವರಣ ಹೇಗೆ ?

July 3, 2025
12:35 PM
ಕರಾವಳಿ ಹಾಗೂ ಮಲೆನಾಡು ಭಾಗರದಲ್ಲಿ ಜುಲೈ 6 ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗಬಹುದು. ತೋಟಗಳಿಗೆ ಔಷಧಿ ಸಿಂಪಡಿಸಲು ಇಡೀ ದಿನ ಮಳೆ ಬಿಟ್ಟು ಸಿಗುವ ಸಾಧ್ಯತೆ ಕಾಣಿಸುತ್ತಿಲ್ಲ.

04.07.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಆದರೆ ಜುಲೈ 6 ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗಬಹುದು. ತೋಟಗಳಿಗೆ ಔಷಧಿ ಸಿಂಪಡಿಸಲು ಇಡೀ ದಿನ ಮಳೆ ಬಿಟ್ಟು ಸಿಗುವ ಸಾಧ್ಯತೆ ಕಾಣಿಸುತ್ತಿಲ್ಲ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜುಲೈ 5ರ ತನಕ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ನಂತರವೂ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಒಂದೆರಡು ಕಡೆ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ, ಯಾದಗಿರಿ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ( ಪಾವಗಢ ಸಹಿತ ), ಚಿತ್ರದುರ್ಗ  ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹೊರತುಪಡಿಸಿ ಉಳಿದ ಭಾಗಗಳಲ್ಲಿ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಜುಲೈ 4 ರಿಂದ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror