04.07.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಆದರೆ ಜುಲೈ 6 ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗಬಹುದು. ತೋಟಗಳಿಗೆ ಔಷಧಿ ಸಿಂಪಡಿಸಲು ಇಡೀ ದಿನ ಮಳೆ ಬಿಟ್ಟು ಸಿಗುವ ಸಾಧ್ಯತೆ ಕಾಣಿಸುತ್ತಿಲ್ಲ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜುಲೈ 5ರ ತನಕ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ನಂತರವೂ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಒಂದೆರಡು ಕಡೆ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ, ಯಾದಗಿರಿ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ( ಪಾವಗಢ ಸಹಿತ ), ಚಿತ್ರದುರ್ಗ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹೊರತುಪಡಿಸಿ ಉಳಿದ ಭಾಗಗಳಲ್ಲಿ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಜುಲೈ 4 ರಿಂದ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಲಡಾಖ್‌ನ ದ್ರಾಸುದಲ್ಲಿಂದು 26ನೇ ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ…
ಧರ್ಮ ಎನ್ನುವ ತಳಹದಿಯಲ್ಲಿ ಬದುಕು ನಿಂತಿದೆ. ಅರ್ಥ ಮತ್ತು ಕಾಮನೆಗಳಿಗೆ ಧರ್ಮವೇ ತಳಹದಿ.…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜುಲೈ 27 ರಂದು ಮಧ್ಯಪ್ರದೇಶ ದಾಟಿ ರಾಜಸ್ಥಾನ ಗಡಿ…
ಭಾರತದಲ್ಲಿ, ಮೇ ತಿಂಗಳಿನಲ್ಲಿ ಉಂಟಾದ ತೀವ್ರ ಉಷ್ಣತೆಯು ಬೆಳೆ ಇಳುವರಿ ಮತ್ತು ಪೂರೈಕೆ…
ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧವಾಗಿದೆ. ಜ್ಯೋತಿಷ್ಯ ಶಾಸ್ತ್ರದ…
ಹಲಸಿನ ಬೀಜದ ಖಾರದ ಕಡ್ಡಿ ಮಳೆ ಬರುವಾಗ ಬಿಸಿ ಬಿಸಿಯಾದ ಕಾಫಿ, ಟೀ,…