ಹವಾಮಾನ ವರದಿ | 08-08-2025 | ಸಾಮಾನ್ಯ ಮಳೆ ಸಾಧ್ಯತೆ | ಆ.15 ರಿಂದ ಎಲ್ಲೆಲ್ಲಾ ಮತ್ತೆ ಮಳೆಯಾಗಬಹುದು..?

August 8, 2025
2:09 PM
ಈಗಿನಂತೆ ಆಗಸ್ಟ್ 10 ರಿಂದ ಮಳೆ ಕಡಿಮೆಯಾಗುವ ಸಾಧ್ಯತೆಗಳಿದ್ದರೂ ಆಗಸ್ಟ್ 16ರಿಂದ ಕರಾವಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಆರಂಭವಾಗುವ ಸೂಚನೆಗಳಿವೆ.

09.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ನಂತರ, ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ.
ಈಗಿನಂತೆ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿದ್ದು, ಆಗಸ್ಟ್ 15 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ. ಈಗಿನಂತೆ ಆಗಸ್ಟ್ 10 ರಿಂದ ಮಳೆ ಕಡಿಮೆಯಾಗುವ ಸಾಧ್ಯತೆಗಳಿದ್ದರೂ ಆಗಸ್ಟ್ 16ರಿಂದ ಕರಾವಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಆರಂಭವಾಗುವ ಸೂಚನೆಗಳಿವೆ.

ಒಳನಾಡು : ಇವತ್ತು ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಹಾವೇರಿ, ಗದಗ, ಬಾಗಲಕೋಟೆ, ವಿಜಯನಗರ, ದಾವಣಗೆರೆ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಉತ್ತಮ ಹಾಗೂ ಉಳಿದ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ಚಿತ್ರದುರ್ಗ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.  ಆಗಸ್ಟ್ 10 ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror