09.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ನಂತರ, ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ.
ಈಗಿನಂತೆ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿದ್ದು, ಆಗಸ್ಟ್ 15 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ. ಈಗಿನಂತೆ ಆಗಸ್ಟ್ 10 ರಿಂದ ಮಳೆ ಕಡಿಮೆಯಾಗುವ ಸಾಧ್ಯತೆಗಳಿದ್ದರೂ ಆಗಸ್ಟ್ 16ರಿಂದ ಕರಾವಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಆರಂಭವಾಗುವ ಸೂಚನೆಗಳಿವೆ.
ಒಳನಾಡು : ಇವತ್ತು ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಹಾವೇರಿ, ಗದಗ, ಬಾಗಲಕೋಟೆ, ವಿಜಯನಗರ, ದಾವಣಗೆರೆ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಉತ್ತಮ ಹಾಗೂ ಉಳಿದ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ಚಿತ್ರದುರ್ಗ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಆಗಸ್ಟ್ 10 ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.
ಶರಾವತಿ ಯೋಜನೆಯ ಬಗ್ಗೆ ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರಭಾರತೀಸ್ವಾಮೀಜಿಯವರಯ ಬರೆದ ಬರಹ...
ಇಂದು ಮನುಷ್ಯನ ಮನಸ್ಥಿತಿ ಹೇಗಿದೆಯೆಂದರೆ ಪುಣ್ಯದ ಫಲ ಬೇಕು, ಆದರೆ ಪುಣ್ಯದ ಕಾರ್ಯ…
ಕಲಬುರ್ಗಿಯಲ್ಲಿ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದೆ. ಮಳೆ ಹಾಗೂ ಪ್ರವಾಹ ಪೀಡಿತ ಗ್ರಾಮಗಳಲ್ಲಿ…
ಬೆಂಗಳೂರು ನಗರದಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ವಿಶೇಷ ಕಾರ್ಯಾಚರಣೆ …
ರಾಜ್ಯದ ಉತ್ತರ ಒಳನಾಡಿನಲ್ಲಿ ನೈರುತ್ಯ ಮಾನ್ಸೂನ್ ಸಕ್ರಿಯವಾಗಿದ್ದು, ಕರಾವಳಿ ಕರ್ನಾಟಕ ಮತ್ತು ದಕ್ಷಿಣ…
ಭಾರತೀಯ ಸಂಸ್ಕೃತಿಯಲ್ಲಿ ನವರಾತ್ರಿ ಮತ್ತು ದಸರಾ ಅತ್ಯಂತ ಪವಿತ್ರ ಹಬ್ಬಗಳಾಗಿವೆ. “ನವರಾತ್ರಿ” ಅಂದರೆ…