Advertisement
ಸುದ್ದಿಗಳು

ಹವಾಮಾನ ವರದಿ | 28-09-2025 | ಸದ್ಯ ಮಳೆ ಲಕ್ಷಣವಿಲ್ಲ….ಕಾರಣವೇನು…?

Share

29.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಸುಳ್ಯ ತಾಲೂಕಿನಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿರಬಹುದು. ಬಿಟ್ಟು ಬಿಟ್ಟು ಬಿರುಸಿನ ಮಳೆಯ ಸಾಧ್ಯತೆ ಇದೆ. ಈಗಿನಂತೆ ಅಕ್ಟೊಬರ್ 4ರ ತನಕ ಈ ವಾತಾವರಣ ಮುಂದುವರಿಯುವ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಸ್ವಲ್ಪ ಹೆಚ್ಚಿರುವ ಮುನ್ಸೂಚನೆ ಇದೆ. ನಾಲ್ಕೂ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಮಳೆ ಹೆಚ್ಚಿರಬಹುದು. ಈಗಿನಂತೆ ಅಕ್ಟೊಬರ್ 4 ರ ತನಕವೂ ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಳೆ ತೀವ್ರತೆ ಕಡಿಮೆಯಾಗಿದ್ದರೂ ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.  ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡಿನಲ್ಲಿ ಸೆಪ್ಟೆಂಬರ್ 30 ರಿಂದ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ದಕ್ಷಿಣ ಒಳನಾಡಿನಲ್ಲಿ ಈಗಾಗಲೇ ಮಳೆ ಕಡಿಮೆಯಾಗಿದೆ. ಆದರೆ, ಅಕ್ಟೊಬರ್ 2 ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮತ್ತೆ ಮಳೆ ಆರಂಭವಾಗುವ ಲಕ್ಷಣಗಳಿವೆ.

ಈಗಿನ ವಾಯುಭಾರ ಕುಸಿತವು ಇವತ್ತು ಮಹಾರಾಷ್ಟ್ರದ ಮುಂಬೈ ಮೂಲಕ ಅರಬ್ಬಿ ಸಮುದ್ರ ಸೇರುವ ನಿರೀಕ್ಷೆ ಇದೆ. ಅಕ್ಟೊಬರ್ 2 ರ ಸುಮಾರಿಗೆ ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಇನ್ನೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಗಳಿವೆ.  ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…

11 hours ago

ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…

16 hours ago

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

2 days ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

2 days ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

2 days ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

2 days ago