Advertisement
ವೆದರ್ ಮಿರರ್

ಹವಾಮಾನ ವರದಿ | 05-08-2025 | ಆ.6 ರಂದು ಕೆಲವು ಕಡೆ ಮಳೆ | ಆ.14 ನಂತರ ಹವಾಮಾನ ಹೇಗಿರಬಹುದು..?

Share

06.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆ ಇರಬಹುದು. ಉತ್ತರ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕೇರಳ ಕರಾವಳಿಯಲ್ಲಿ ಉಂಟಾದ ಮೇಲ್ಮೈ ಸುಳಿಗಾಳಿಯು ಕರಾವಳಿ ತೀರದಲ್ಲೇ ಉತ್ತರಕ್ಕೆ ಚಲಿಸಲಿದ್ದು ನಾಳೆ ಸಂಜೆ ಉಡುಪಿ ಜಿಲ್ಲೆಯ ತನಕ ಚಲಿಸಿ ಶಿಥಿಲಗೊಳ್ಳುವ ಸಾಧ್ಯತೆಗಳಿವೆ . ಈಗಿನಂತೆ ಆಗಸ್ಟ್ 6 ರಂದು ಮಾತ್ರ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಮಳೆ ಸ್ವಲ್ಪ ಹೆಚ್ಚಿರಬಹುದು.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಅಲ್ಲಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಈಗಿನಂತೆ ಆಗಸ್ಟ್ 6ರಂದು ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಸ್ವಲ್ಪ ಹೆಚ್ಚಿರುವ ಸಾಧ್ಯತೆಗಳಿವೆ. ಆಗಸ್ಟ್ 7ರಿಂದ ಮಲೆನಾಡು ಭಾಗಗಳಲ್ಲಿ ಮಳೆ ಕಡಿಮೆಯಾಗಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.

ಒಳನಾಡು : ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮುಂಜಾನೆ ಮಳೆಯಾಗಿದೆ. ಇವತ್ತು ಸಂಜೆ, ರಾತ್ರಿ ವೇಳೆ ಉತ್ತರ ಹಾಗೂ ದಕ್ಷಿಣ ಒಳನಾಡು ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದ್ದು, ಕೆಲವು ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಆಗಸ್ಟ್ 8ರ ತನಕ ಹಾಗೂ ಉತ್ತರ ಒಳನಾಡಿನಲ್ಲಿ ಆಗಸ್ಟ್ 10ರ ತನಕವೂ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.

ಮುಂಗಾರು ಮತ್ತಷ್ಟು ದುರ್ಬಲಗೊಳ್ಳತ್ತಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ ತಿಂಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆಗಳಿವೆ. ಈ ಭಾಗಗಳಲ್ಲಿ ಆಗಸ್ಟ್ 14ರ ನಂತರ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಬಂಗಾಳಕೊಲ್ಲಿಯಲ್ಲಿ ಅಥವಾ ಅರಬ್ಬಿ ಸಮುದ್ರದ ಕರಾವಳಿ ತೀರದಲ್ಲಿ ತಿರುಗುವಿಕೆ, ವಾಯುಭಾರ ಕುಸಿತದಂತಹ ವಿದ್ಯಮಾನಗಳು ಉಂಟಾದರೆ ಮಾತ್ರ ಮಳೆಯಾಗಬಹುದು.

ಮುಂಗಾರು ದುರ್ಬಲಗೊಳ್ಳಲು ಫೆಸಿಫಿಕ್ ಸಾಗರದಲ್ಲಿ ಮೇಲಿಂದ ಮೇಲೆ ಉಂಟಾಗುವ ಪ್ರಭಲ ಭೂಕಂಪನಗಳು ಹಾಗೂ ಆಸ್ಟ್ರೇಲಿಯಾ, ನ್ಯೂಜಿಲೆಂಡ್ ನ ಪೂರ್ವ ಕರಾವಳಿಯಿಂದ ಹಿಡಿದು ಜಪಾನ್, ರಶ್ಯಾ ತನಕವೂ ಅಲ್ಲಲ್ಲಿ ಉದ್ಭವಿಸುತ್ತಿರುವ ಜ್ವಾಲಾಮುಖಿಗಳ ಕಾರಣವೂ ಇರಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

11 hours ago

ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!

ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…

12 hours ago

ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌

ಪಡಿತರ ಚೀಟಿಗೆ ಆಧಾರ್‌ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ…

12 hours ago

ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ

ಅಕ್ರಮ ಅಡಿಕೆ ವ್ಯಾಪಾರ, ಕಳ್ಳಸಾಗಣೆ ಹಾಗೂ ಜಿಎಸ್‌ಟಿ ವಂಚನೆ ಆರೋಪದ ತನಿಖೆಯಲ್ಲಿ ಪಶ್ಚಿಮ…

12 hours ago

ಇಂಧನ ಮಾತ್ರವಲ್ಲ, ಕೃಷಿಗೂ ಹೊಸ ಮಾರುಕಟ್ಟೆ: ಎಥೆನಾಲ್‌ ಮಿಶ್ರಣ ಕೃಷಿ ವೈವಿಧ್ಯೀಕರಣಕ್ಕೆ ಹೆಜ್ಜೆ ಎಂದ ಗಡ್ಕರಿ

ಎಥೆನಾಲ್‌ ಮಿಶ್ರಣವು ಕೇವಲ ಇಂಧನ ನೀತಿಯಲ್ಲ, ಕೃಷಿ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಸೃಷ್ಟಿಸುವ…

13 hours ago

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

1 day ago