Advertisement
ಸುದ್ದಿಗಳು

ಹವಾಮಾನ ವರದಿ | 31-07-2025 | ಇನ್ನೊಂದು ವಾಯುಭಾರ ಕುಸಿತದ ಲಕ್ಷಣ |

Share

01.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮುಂಗಾರು ದುರ್ಬಲಗೊಂಡಿದ್ದರೂ ಆಗಸ್ಟ್ 3ರ ತನಕ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ನಂತರ ಮೋಡ ಹಾಗೂ ಬಿಸಿಲಿನ ವಾತಾವರಣದ ಸಾಧ್ಯತೆಗಳಿದ್ದರೂ, ಸುಮಾರು ಆಗಸ್ಟ್ 7ರ ಸಮಯದಲ್ಲಿ ತಮಿಳುನಾಡು ಕರಾವಳಿ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ. ಇದರ ಮೇಲೆ ಅವಲಂಬಿಸಿದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ. ಈಗಿನಂತೆ ಆಗಸ್ಟ್ 4ರ ನಂತರ ಅಲ್ಲಲ್ಲಿ ಗುಡುಗು ಮಳೆಯ ಸಾಧ್ಯತೆಗಳನ್ನು ತೋರಿಸುತ್ತಿದೆ.

ಒಳನಾಡು : ಉತ್ತರ ಒಳನಾಡಿನ ವಿಜಯನಗರ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು(ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಆಗಸ್ಟ್ 4ರಿಂದ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.

ಆಗಸ್ಟ್ 2ನೇ ವಾರದಲ್ಲಿ ತಮಿಳುನಾಡು ಕರಾವಳಿಯ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಸಾಧ್ಯತೆಗಳಿರುವುದರಿಂದ ಆಗಸ್ಟ್ 4ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ತಮಿಳುನಾಡು ಮೂಲಕ ಹಾದು ಬರುವ ಮೋಡಗಳಿಂದ ಗುಡುಗು ಸಹಿತ ಉತ್ತಮ ಮಳೆಯ ಸಾಧ್ಯತೆಗಳನ್ನು ತೋರಿಸುತ್ತಿದೆ ಹಾಗೂ ಮತ್ತಿನ 2 ದಿನಗಳಲ್ಲಿ ಉತ್ತರ ಒಳನಾಡು ಭಾಗಗಳಿಗೂ ವ್ಯಾಪಿಸುವ ಸೂಚನೆಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

18 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago