Advertisement
ವೆದರ್ ಮಿರರ್

ಹವಾಮಾನ ವರದಿ | 28-04-2025 | ಇಂದು ಅಲ್ಲಲ್ಲಿ ಗುಡುಗು ಸಹಿತ ಮಳೆ | ಮೇ 1ರಿಂದ ಮಳೆ ಹೆಚ್ಚಾಗುವ ಲಕ್ಷಣ

Share

29.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು – ಕರ್ನಾಟಕದ ಗಡಿ ಭಾಗಗಳ ಸುತ್ತಮುತ್ತ, ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ, ಉಡುಪಿ ಜಿಲ್ಲೆಯ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣದ ಜೊತೆಗೆ ಒಂದೆರಡು ಕಡೆ ಅನಿರೀಕ್ಷಿತ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ ಸಾಧ್ಯತೆಗಳಿದ್ದರೂ ಮೇ 1ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ ಜಿಲ್ಲೆಯ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಕುದುರೆಮುಖ, ಆಗುಂಬೆ, ಶೃಂಗೇರಿ ಕೊಪ್ಪ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ, ತೀರ್ಥಹಳ್ಳಿ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಶಿವಮೊಗ್ಗ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಚಿಕ್ಕಮಗಳೂರು ಹಾಗೂ ಹಾಸನ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ತುಂತುರು ಮಳೆಯ ಸಾಧ್ಯತೆ ಇದೆ.ಈಗಿನಂತೆ ಎಪ್ರಿಲ್ 29 ರಿಂದ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಮೇ 1ರಿಂದ ಮಳೆ ಹೆಚ್ಚಾಗುವ ಸೂಚನೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಉಳಿದ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು, ಮೋಡದ ವಾತಾವರಣ ಇರಬಹುದು. ಈಗಿನಂತೆ ಮುಂದಿನ 2 ದಿವಸಗಳ ಕಾಲ ಮಳೆ ಕಡಿಮೆಯಾಗುವ ಸೂಚನೆಗಳಿದ್ದು, ಮೇ 1ರಿಂದ ದಕ್ಷಿಣ ಒಳನಾಡು ಹಾಗೂ ಮೇ 4ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

14 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

1 day ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

1 day ago

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…

1 day ago

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

1 day ago

ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…

1 day ago