Advertisement
ಸುದ್ದಿಗಳು

ಹವಾಮಾನ ವರದಿ | 04-09-2024 | ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆ |

Share

05.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ಒಂದೆರಡು ಸಾಧಾರಣ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಒಂದೆರಡು ಮಳೆ ಜಾಸ್ತಿ ಇರಬಹುದು. ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಆಗಾಗ ಮೋಡದ ವಾತಾವರಣದೊಂದಿಗೆ ಮಧ್ಯಾಹ್ನ ಮೇಲೆ, ಸಂಜೆ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.

ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಹಾವೇರಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಈಗಿನಂತೆ ಮುಂದಿನ 10 ದಿನಗಳವರೆಗೂ ಇದೇ ಪರಿಸ್ಥಿತಿ ಮುಂದುವರಿಯುವ ಲಕ್ಷಣಗಳಿವೆ. ಕರಾವಳಿಯಲ್ಲಿ ಮಾತ್ರ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ಸೆಪ್ಟೆಂಬರ್ 8ರಿಂದ ಮುಂದಿನ 4 ದಿನಗಳ ಕಾಲ ಸ್ವಲ್ಪ ಜಾಸ್ತಿ ಇರಬಹುದು. ಮಲೆನಾಡು ಭಾಗಗಳಲ್ಲಿಯೂ ಒಂದೆರಡು ಸಾಮಾನ್ಯ ಮಳೆಯ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

2 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

2 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

2 hours ago

ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ

ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…

2 hours ago

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

20 hours ago

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

1 day ago