06.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :…..ಮುಂದೆ ಓದಿ….
ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕರಾವಳಿ ತೀರ ಭಾಗಗಳಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ ಇದ್ದು, ಉಳಿದ ಭಾಗಗಳಲ್ಲಿ ಮೋಡ ಮತ್ತು ತುಂತುರು ಮಳೆಯ ಮುನ್ಸೂಚನೆ ಇದೆ.
ರಾಯಚೂರು, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ತುಮಕೂರು, ಚಿತ್ರದುರ್ಗ ದಕ್ಷಿಣ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ವಿಜಯಪುರ, ಕಲಬುರ್ಗಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ.
ಈಗಿನಂತೆ ಸೆಪ್ಟೆಂಬರ್ 6ರಿಂದ ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳದ ಕರಾವಳಿ ಸಮೀಪ ವಾಯುಭಾರ ಕುಸಿತದ ಲಕ್ಷಣಗಳಿದ್ದು, ರಾಜ್ಯದ ಕರಾವಳಿ ಭಾಗಗಳಲ್ಲಿ ಸೆಪ್ಟೆಂಬರ್ 8 ರಿಂದ ಮಳೆ ಸ್ವಲ್ಪ ಜಾಸ್ತಿಯಾಗುವ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಕಾದು ನೋಡಬೇಕಾಗಿದೆ.