ಹವಾಮಾನ ವರದಿ | 05-09-2024 | ಸೆ. 8 ರಿಂದ ಕರಾವಳಿ ಭಾಗದಲ್ಲಿ ಮಳೆ ಸ್ವಲ್ಪ ಜಾಸ್ತಿಯಾಗುವ ಮುನ್ಸೂಚನೆ |

September 5, 2024
11:53 AM
ಸೆಪ್ಟೆಂಬರ್ 6ರಿಂದ ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳದ ಕರಾವಳಿ ಸಮೀಪ ವಾಯುಭಾರ ಕುಸಿತದ ಲಕ್ಷಣಗಳಿದ್ದು, ರಾಜ್ಯದ ಕರಾವಳಿ ಭಾಗಗಳಲ್ಲಿ ಸೆಪ್ಟೆಂಬರ್ 8 ರಿಂದ ಮಳೆ ಸ್ವಲ್ಪ ಜಾಸ್ತಿಯಾಗುವ ಮುನ್ಸೂಚನೆ ಇದೆ

06.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :…..ಮುಂದೆ ಓದಿ….

ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕರಾವಳಿ ತೀರ ಭಾಗಗಳಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ ಇದ್ದು, ಉಳಿದ ಭಾಗಗಳಲ್ಲಿ ಮೋಡ ಮತ್ತು ತುಂತುರು ಮಳೆಯ ಮುನ್ಸೂಚನೆ ಇದೆ.

ರಾಯಚೂರು, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ತುಮಕೂರು, ಚಿತ್ರದುರ್ಗ ದಕ್ಷಿಣ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ವಿಜಯಪುರ, ಕಲಬುರ್ಗಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ.

ಈಗಿನಂತೆ ಸೆಪ್ಟೆಂಬರ್ 6ರಿಂದ ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳದ ಕರಾವಳಿ ಸಮೀಪ ವಾಯುಭಾರ ಕುಸಿತದ ಲಕ್ಷಣಗಳಿದ್ದು, ರಾಜ್ಯದ ಕರಾವಳಿ ಭಾಗಗಳಲ್ಲಿ ಸೆಪ್ಟೆಂಬರ್ 8 ರಿಂದ ಮಳೆ ಸ್ವಲ್ಪ ಜಾಸ್ತಿಯಾಗುವ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಕಾದು ನೋಡಬೇಕಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಬದುಕಿನ “ಬ್ಯಾಗೇಜ್‌” ಇಳಿಸುವ ಸಮಯ ಇದು
September 25, 2026
7:14 PM
by: ಮಹೇಶ್ ಪುಚ್ಚಪ್ಪಾಡಿ
ರೈತರಿಗೆ ವಿದ್ಯುತ್‌ ಶಾಕ್ – ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಕಡಿತ- ಪರ್ಯಾಯ ಶಕ್ತಿಯ ಬಗ್ಗೆ ಯೋಚಿಸಲು ಸಕಾಲ
September 25, 2026
1:19 PM
by: ದ ರೂರಲ್ ಮಿರರ್.ಕಾಂ
ಅ.29 ರಿಂದ ನ.11 ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ -12 ದಿನ ಸಾರ್ವಜನಿಕ ದರ್ಶನ
September 25, 2026
12:51 PM
by: ದ ರೂರಲ್ ಮಿರರ್.ಕಾಂ
ಪಿಎಂ-ಕುಸುಮ್ ಯೋಜನೆಯಿಂದ ರೈತರ ನೀರಾವರಿಗೆ ಸೌರಶಕ್ತಿ
September 25, 2026
12:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror