ಹವಾಮಾನ ವರದಿ | 07-09-2024 | ರಾಜ್ಯದ ಅಲ್ಲಲ್ಲಿ ಸಾಮಾನ್ಯ ಮಳೆ | ಸೆ.13 ರಿಂದ ಕರಾವಳಿ ಜಿಲ್ಲೆಯಲ್ಲೂ ಮಳೆ ಕಡಿಮೆ ಸಾಧ್ಯತೆ |

September 7, 2024
2:22 PM
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದಂತೆಯೇ, ಅಂದರೆ ಸೆಪ್ಟೆಂಬರ್ 13 ಅಥವಾ 14ರ ನಂತರ ತನಕ ಕರಾವಳಿ ಭಾಗಗಳಲ್ಲಿಯೂ ಮಳೆ ಕಡಿಮೆಯಾಗುವ  ಲಕ್ಷಣಗಳಿವೆ.

08.09.2024 ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ, ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಹಾಸನದ ತುಮಕೂರು ಕಡೆಗೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಇವತ್ತು ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಇನ್ನೆರಡು ದಿನಗಳಲ್ಲಿ ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಈಗಿನ ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದಂತೆಯೇ, ಅಂದರೆ ಸೆಪ್ಟೆಂಬರ್ 13 ಅಥವಾ 14ರ ನಂತರ ತನಕ ಕರಾವಳಿ ಭಾಗಗಳಲ್ಲಿಯೂ ಮಳೆ ಕಡಿಮೆಯಾಗುವ  ಲಕ್ಷಣಗಳಿವೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror