08.09.2024 ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ, ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಹಾಸನದ ತುಮಕೂರು ಕಡೆಗೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಇವತ್ತು ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಇನ್ನೆರಡು ದಿನಗಳಲ್ಲಿ ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಈಗಿನ ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದಂತೆಯೇ, ಅಂದರೆ ಸೆಪ್ಟೆಂಬರ್ 13 ಅಥವಾ 14ರ ನಂತರ ತನಕ ಕರಾವಳಿ ಭಾಗಗಳಲ್ಲಿಯೂ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…
ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…
ಹಲಸಿನ ಹಣ್ಣಿನ ಹಲ್ವಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 1 ಕಪ್. ಜಾರ್…
ಈಗಿನ ಹೆತ್ತವರ ಮಾತೇ ಹಾಗೆ. ನಾವು ಕಷ್ಟಪಟ್ಟಿದ್ದೇವೆ. ನಮ್ಮ ಮಕ್ಕಳು ಕಷ್ಟಪಡುವುದು ಬೇಡ.…