10.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :…..ಮುಂದೆ ಓದಿ….
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಸೆಪ್ಟೆಂಬರ್ 10 ಹಾಗೂ 11ರಂದು ಸ್ವಲ್ಪ ಜಾಸ್ತಿ ಇರಲಿದ್ದು. ಆನಂತರ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 14ರಿಂದ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.
ಕೊಡಗಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಸೋಮವಾರಪೇಟೆ ಸುತ್ತಮುತ್ತ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಹಾಸನ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದೊಂದಿಗೆ, ಸಕಲೇಶಪುರ ಸುತ್ತಮುತ್ತ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದ್ದು, ಉಳಿದ ಭಾಗಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ. ಸೆಪ್ಟೆಂಬರ್ 14ರಿಂದ ಬಿಸಿಲಿನ ಅವಧಿ ಹೆಚ್ಚಾಗುವ ನಿರೀಕ್ಷೆ ಇದೆ.
ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಪ್ಪಳ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸೆಪ್ಟೆಂಬರ್ 10ರಿಂದ ಮಳೆಯ ಕಡಿಮೆಯಾಗಿ, ಸೆಪ್ಟೆಂಬರ್ 14ರಿಂದ ಬಿಸಿಲಿನ ವಾತಾವರಣದ ಅವಧಿ ಹೆಚ್ಚಿರಬಹುದು.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಒಡಿಶಾ ಮೂಲಕ ಭೂ ಪ್ರವೇಶಿಸಿದ್ದು, ಮುಂದೆ ಮಧ್ಯಪ್ರದೇಶಕ್ಕೆ ಸಾಗಿ, ಅಲ್ಲಿಂದ ಸೆಪ್ಟೆಂಬರ್ 14ರ ಸುಮಾರಿಗೆ ಉತ್ತರ ಪ್ರದೇಶ, ಉತ್ತರಾಖಂಡ ಚಲಿಸಿ ಶಿಥಿಲಗೊಳ್ಳುವ ಲಕ್ಷಣಗಳಿವೆ.