12.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಎರಡು ಮೂರು ಮಳೆಯ ಮುನ್ಸೂಚೆನೆ ಇದೆ. ನಡುವೆ ಬಿಡುವಿನ ಅವಧಿ ಸ್ವಲ್ಪ ಜಾಸ್ತಿ ಇರಬಹುದು. ಕರಾವಳಿ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಈಗಿನಂತೆ ಸೆಪ್ಟೆಂಬರ್ 13ರಿಂದ ಮಳೆ ತುಂಬಾ ಕಡಿಮೆ ಆಗುವ ಮುನ್ಸೂಚನೆ ಇದ್ದು ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.
ಕೊಡಗಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಸುತ್ತಮುತ್ತ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಸೆಪ್ಟೆಂಬರ್ 13ರಿಂದ ಮಳೆ ಸಂಪೂರ್ಣ ಕಡಿಮೆಯಾಗುವ ಲಕ್ಷಣಗಳಿವೆ.
ಹಾವೇರಿ, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣ ಇರಲಿದ್ದು, ಸೆಪ್ಟೆಂಬರ್ 13ರಿಂದ ಎರಡು ದಿನಗಳ ಕಾಲ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಹಾವೇರಿ, ಗದಗ, ವಿಜಯನಗರ, ಕೊಪ್ಪಳ, ಬಳ್ಳಾರಿ ಜಿಲ್ಲೆಗಳ ಕುಡಿಯುವ ನೀರಿನ ಯೋಜನೆಗಳಿಗೆ ಹಾಗೂ…
ಕೂಲಿ ಕಾರ್ಮಿಕರು ಜೀವನ ನಿರ್ವಹಣೆ ಮಾಡಲು ದೂರದ ನಗರಗಳಿಗೆ ವಲಸೆ ಹೋಗದೆ ಉದ್ಯೋಗ…
ಮುಂದಿನ ಮೂರು ದಿನಗಳ ಕಾಲ ರಾಜ್ಯದ ಕೆಲವೆಡೆ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ…
ಭಾರತದಲ್ಲಿ 1.4 ಮಿಲಿಯನ್ ಹೊಸ ಕ್ಯಾನ್ಸರ್ ಪ್ರಕರಣಗಳು ವರದಿಯಾಗುತ್ತಿವೆ. ಈ ಪೈಕಿ ಸುಮಾರು…
ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ ಇದೆ. ಈಗಿನಂತೆ ಎಪ್ರಿಲ್ 2ರಿಂದ…
ರಾಜ್ಯದಲ್ಲಿ ನಂದಿನಿ ಹಾಲು, ಮೊಸರು ಹಾಗೂ ವಿದ್ಯುತ್ ದರ ದುಬಾರಿಯಾಗಲಿದೆ.