19.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಈಗಿನಂತೆ ಸೆಪ್ಟೆಂಬರ್ 22ರ ವರೆಗೂ ಬಿಸಿಲು ಹಾಗೂ ಮೋಡದ ವಾತಾವರಣ ಇರುವ ಲಕ್ಷಣಗಳಿದ್ದು, ನಂತರ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದ್ದು, ಅಲ್ಲಲ್ಲಿ ಸ್ವಲ್ಪ ಮೋಡ ಹಾಗೂ ಶಿವಮೊಗ್ಗದ ಒಂದೆರಡು ಕಡೆ ತುಂತುರು ಮಳೆ ಇರಬಹುದು.
ಈಗಿನಂತೆ ಸೆಪ್ಟೆಂಬರ್ 23ರ ನಂತರ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಒಳನಾಡು : ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ಈಗಿನಂತೆ ಸೆಪ್ಟೆಂಬರ್ 21ರಿಂದ ಉತ್ತರ ಒಳನಾಡು ಹಾಗೂ ಸೆಪ್ಟೆಂಬರ್ 23ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. .
ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…
ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …
ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿ ಹಲವು ಮಹತ್ವದ ನಿರ್ಧಾರಗಳನ್ನು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ವರ್ಷದಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿರುವುರಿಂದ, ಪಾರಂಪರಿಕ ಮಾಗಿ…
ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490