13.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕಡಲ ತೀರ ಭಾಗಗಳ ಸುತ್ತಮುತ್ತ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಧಾರಣ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಅಕ್ಟೊಬರ್ 14 ರಿಂದ ಹಿಂಗಾರು ಮತ್ತು ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ಮಳೆ ಹೆಚ್ಚಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಒಳನಾಡು ಭಾಗಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಹಿಂಗಾರು ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದ ಅಕ್ಟೊಬರ್ 14ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ.
ಒಳನಾಡು : ಹಾವೇರಿ, ಧಾರವಾಡ, ಗದಗ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಉತ್ತರ ಒಳನಾಡು ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ (ಕೊಳ್ಳೇಗಾಲ ಭಾಗಗಳಲ್ಲಿ), ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ( ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅಕ್ಟೊಬರ್ 17ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಇನ್ನೆರಡು ದಿನಗಳಲ್ಲಿ ಓಮನ್ ಕರಾವಳಿಗೆ ತಲಪಿ ಶಿಥಿಲಗೊಳ್ಳುವ ಸಾಧ್ಯತೆ ಇದೆ. ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯ ಆಂದ್ರಾ, ತಮಿಳುನಾಡು ಕರಾವಳಿಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಅಕ್ಟೊಬರ್ 16ರಂದು ತಮಿಳುನಾಡು ಅಥವಾ ಆಂದ್ರಾ ಕರಾವಳಿ ಮೂಲಕ ಪ್ರವೇಶಿಸುವ ಲಕ್ಷಣಗಳಿವೆ. ರಾಜ್ಯದಲ್ಲೂ ಇದರ ಪ್ರಭಾವದಿಂದ ಭಾರಿ ಮಳೆಯ ನಿರೀಕ್ಷೆ ಇದೆ.
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…
ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…