ಹವಾಮಾನ ವರದಿ | 23-10-2024 | ಸಾಮಾನ್ಯ ಮಳೆ ಮುಂದುವರಿಕೆ | ಅ.28 ರಿಂದ ತಾಪಮಾನದ ಕಾರಣದಿಂದ ಮಳೆ ಸಾಧ್ಯತೆ |

October 23, 2024
12:05 PM
ಅಕ್ಟೊಬರ್ 24ರಂದು ಸಾಮಾನ್ಯ ಮಳೆಯ ಸಾಧ್ಯತೆ ಇದ್ದು, 25ರಿಂದ ಮಳೆ ಸಂಪೂರ್ಣ ಕಡಿಮೆಯಾಗುವ ಸಾಧ್ಯತೆಗಳಿವೆ.ಅಕ್ಟೊಬರ್ 28ರಿಂದ ರಾಜ್ಯದ ಕೆಲವು ಭಾಗಗಳಲ್ಲಿ ಅಧಿಕ ತಾಪಮಾನದ ಕಾರಣದಿಂದ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

24.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಜಿಲ್ಲೆಯ ಕಡಲ ತೀರ ಭಾಗಗಳ ಸುತ್ತಮುತ್ತ ಅಲ್ಲಲ್ಲಿ ರಾತ್ರಿ ಸಾಮಾನ್ಯ ಮಳೆಯ ಸಾಧ್ಯತೆ ಇದ್ದರೆ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಾಲೂಕು ಪ್ರದೇಶಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ, ಪುತ್ತೂರು, ಬಂಟ್ವಾಳ ತನಕವೂ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಅಕ್ಟೊಬರ್ 24ರಂದು ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, 25ರಿಂದ ಮಳೆಯ ಸಾಧ್ಯತೆ ಕಾಣುತ್ತಿಲ್ಲ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿಯೇ ಇರಬಹುದು. ಈಗಿನಂತೆ ಅಕ್ಟೊಬರ್ 24ರಂದು ಸಾಮಾನ್ಯ ಮಳೆಯ ಸಾಧ್ಯತೆ ಇದ್ದು, 25ರಿಂದ ಮಳೆ ಸಂಪೂರ್ಣ ಕಡಿಮೆಯಾಗುವ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಗದಗ, ದಾವಣಗೆರೆ ಹಾಗೂ ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಮಾತ್ರ ಇರಬಹುದು.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಚಿಕ್ಕಬಳ್ಳಾಪುರ, ತುಮಕೂರು ( ಪಾವಗಢ ಮಳೆ ಸ್ವಲ್ಪ ಜಾಸ್ತಿ ಇರಬಹುದು), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡಿನಲ್ಲಿ ಅಕ್ಟೊಬರ್ 24 ರಿಂದ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಕ್ಟೊಬರ್ 25ರಿಂದ ಮಳೆ ಸಂಪೂರ್ಣ ಕಡಿಮೆಯಾಗುವ ಲಕ್ಷಣಗಳಿವೆ.

ಬಂಗಾಳಕೊಲ್ಲಿಯ ಡಾನಾ ಚಂಡಮಾರುತವು ಅಕ್ಟೊಬರ್ 24ರ ರಾತ್ರಿ ಪಶ್ಚಿಮ ಬಂಗಾಳ ಹಾಗೂ ಒಡಿಸ್ಸಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಗಳಿವೆ. ಇದರೊಂದಿಗೆ ಹಿಂಗಾರು ಸಂಪೂರ್ಣ ದುರ್ಬಲಗೊಳ್ಳಲಿದೆ. ಇದೇ ಸಂದರ್ಭದಲ್ಲಿ ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಸಣ್ಣ ಪ್ರಮಾಣದ ತಿರುಗಿ ಉಂಟಾಗಿದ್ದು, ಪಶ್ಚಿಮಾಭಿಮುಖವಾಗಿ ಚಲಿಸುವ ಲಕ್ಷಣಗಳಿವೆ. ಆದರೆ ರಾಜ್ಯದ ಮೇಲೆ ಯಾವುದೇ ಪರಿಣಾಮ ಕಾಣಿಸುತ್ತಿಲ್ಲ. ಈಗಿನಂತೆ ಅಕ್ಟೊಬರ್ 28ರಿಂದ ರಾಜ್ಯದ ಕೆಲವು ಭಾಗಗಳಲ್ಲಿ ಅಧಿಕ ತಾಪಮಾನದ ಕಾರಣದಿಂದ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror