Advertisement
ಸುದ್ದಿಗಳು

ಹವಾಮಾನ ವರದಿ | 31-10-2024 | ಎರಡು ದಿನ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ | ಮಳೆ ದೂರವಾಗುವ ಲಕ್ಷಣ |

Share

01.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಈಗಿನಂತೆ ಈ ಮಳೆಯು ಮುಂದಿನ 3 ಅಥವಾ 4 ದಿನಗಳ ಕಾಲ ಮುಂದುವರಿಯುವ ಸಾಧ್ಯತೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಈಗಿನಂತೆ ಈ ಮಳೆಯು ನವೆಂಬರ್ 4ರ ವರೆಗೆ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದರೆ ಬಾಗಲಕೋಟೆ, ಗದಗ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ತುಮಕೂರು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಅಲ್ಲಲ್ಲಿ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ನವೆಂಬರ್ 2ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ನವೆಂಬರ್ 4 ಅಥವಾ 5ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

22 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

1 day ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago