ಹವಾಮಾನ ವರದಿ | 07-07-2024 | ರಾಜ್ಯದ ಕೆಲವು ಕಡೆ ಸಾಮಾನ್ಯ, ಕೆಲವು ಕಡೆ ಉತ್ತಮ ಮಳೆ ನಿರೀಕ್ಷೆ |

July 7, 2024
2:43 PM
ಜುಲೈ 9 ಅಥವಾ 10ರಿಂದ ದಕ್ಷಿಣ ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಉತ್ತರ ಒಳನಾಡು ಹಾಗೂ ಉತ್ತರ ಕರಾವಳಿ ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.

08.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ಭಾಗದಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಕೊಡಗು, ಹಾಸನ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು. ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಹೆಚ್ಚಿನ ಭಾಗಗಳಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು.

ತುಮಕೂರು, ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ದಕ್ಷಿಣ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ಗದಗ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.

ಈಗಿನಂತೆ ಜುಲೈ 9 ಅಥವಾ 10ರಿಂದ ದಕ್ಷಿಣ ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಉತ್ತರ ಒಳನಾಡು ಹಾಗೂ ಉತ್ತರ ಕರಾವಳಿ ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ
ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ
October 13, 2026
9:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror