06.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮಳೆಯ ವ್ಯಾಪ್ತಿಯೂ ಹೆಚ್ಚಿರಲಾರದು. ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಈಗಿನಂತೆ ನವೆಂಬರ್ 6 ಮತ್ತು 7ರಂದು ಬಿಡುವು ಪಡೆವ ಮಳೆಯು ನ.8 ರಿಂದ ಅಲ್ಲಲ್ಲಿ ಸಾಮಾನ್ಯ ಮಳೆ ಪ್ರಾರಂಭವಾಗಿ, 10ರಿಂದ ಹೆಚ್ಚಾಗುವ ಸಾಧ್ಯತೆ ಇದೆ.
ಮಲೆನಾಡು : ಕೊಡಗು ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ನವೆಂಬರ್ 8 ಅಥವಾ 9ರಿಂದ ಮತ್ತೆ ಮಳೆ ಆರಂಭವಾಗುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ನವೆಂಬರ್ 8ರಿಂದ ಮತ್ತೆ ಚುರುಕಾಗುವ ಸಾಧ್ಯತೆಗಳಿವೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತದಂತಹ ತಿರುವಿಕೆಯಿಂದ ಹಿಂಗಾರು ದುರ್ಬಲಗೊಳ್ಳುವ ಲಕ್ಷಣಗಳಿದ್ದು, ನವೆಂಬರ್ 10ರಿಂದ ಮತ್ತೆ ಬಲಗೊಳ್ಳುವ ಲಕ್ಷಣಗಳಿವೆ.
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…