17.11.2024 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಕಡಲ ತೀರ ಭಾಗಗಳಲ್ಲಿ ಅಲ್ಲಲ್ಲಿ ರಾತ್ರಿ ತುಂತುರು ಮಳೆಯ ಸಾಧ್ಯತೆಗಳಿದ್ದು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಉಳಿದ ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ. ಈಗಿನಂತೆ ನವೆಂಬರ್ 18ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಸಂಜೆಯ ವೇಳೆಗೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ನವೆಂಬರ್ 18 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸಿದ್ದು, ಒಣ ಹವೆ ಮುಂದುವರಿಯಲಿದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದ್ದು, ನವೆಂಬರ್ 18 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಮಳೆ ಕಡಿಮೆಯಾಗಿ ಒಣ ಹವೆ ಆವರಿಸುವ ಲಕ್ಷಣಗಳಿವೆ. ಈಗಿನಂತೆ ನವೆಂಬರ್ 20 ರಿಂದ ರಾಜ್ಯದಾದ್ಯಂತ ಒಣಹವೆ ಆವರಿಸುವ ಸಾಧ್ಯತೆಗಳಿವೆ.
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಸಹಯೋಗದಲ್ಲಿ ಜಿಕೆವಿಕೆ ಆವರಣದಲ್ಲಿ ಇಂದಿನಿಂದ ನ.17ರ ವರೆಗೆ ಕೃಷಿ…
ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ತಂಡವು 53 ಲಾರಿಗಳಿಂದ 10,855 ಚೀಲಗಳ ಕಳ್ಳಸಾಗಾಣಿಕೆಯ ಅಡಿಕೆಯನ್ನು…
ಜೈವಿಕ ಇಂಧನ ಕ್ಷೇತ್ರದಲ್ಲಿ ಭಾರತ ಗಮನಾರ್ಹ ಪ್ರಗತಿ ಸಾಧಿಸುತ್ತಿದೆ. ಇಂಧನ ಸುಸ್ಥಿರತೆ ಮತ್ತು…
ಜೀವನಶೈಲಿ ಬದಲಾವಣೆ ಮೂಲಕ ಮಧುಮೇಹ ನಿಯಂತ್ರಿಸಬಹುದು ಎಂದು ಸಿಮ್ಸ್ ನಿರ್ದೇಶಕ ಡಾ. ವಿರುಪಾಕ್ಷಪ್ಪ…
ಬ್ಯಾಟರಿ ಚಾಲಿತ ವಾಹನಗಳು, ಹಸಿರು ಶಕ್ತಿ ಮತ್ತು ಪರಿಸರ ಸ್ನೇಹಿ ಸಾರಿಗೆಯ ಆಯ್ಕೆಯಾಗಿವೆ…
ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಅವಧಿಯನ್ನು ಡಿಸೆಂಬರ್ 18 ರವರೆಗೆ ವಿಸ್ತರಣೆ ಮಾಡಲಾಗಿದೆ…