ಹವಾಮಾನ ವರದಿ | 17-11-2024 | ನಾಳೆಯಿಂದ ಮಳೆಯ ಪ್ರಮಾಣ ಕಡಿಮೆ | ಇಂದು ಅಲ್ಲಲ್ಲಿ ಗುಡುಗು ಮಳೆ ಸಾಧ್ಯತೆ | ಶ್ರೀಲಂಕಾ ಕರಾವಳಿಯ ಹವಾಮಾನ ಪರಿಣಾಮ ಏನಾಗಬಹುದು..?

November 17, 2024
1:02 PM
ಈಗಿನಂತೆ ನವೆಂಬರ್ 18 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಒಣ ಹವೆ ಆವರಿಸುವ ಸಾಧ್ಯತೆಗಳಿವೆ. ಆದರೆ ನವೆಂಬರ್ 21 ಅಥವಾ 22ರ ಸುಮಾರಿಗೆ ಉತ್ತರ ಸುಮಾತ್ರ ಕರಾವಳಿಯಲ್ಲಿ ಹಾಗೂ ಶ್ರೀಲಂಕಾದ ನೈರುತ್ಯ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಆರಂಭವಾಗುವ ಲಕ್ಷಣಗಳಿವೆ. ಇದರ ಪರಿಣಾಮವನ್ನು ಕಾದು ನೋಡಬೇಕಾಗಿದೆ.

18.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ನವೆಂಬರ್ 18ರಿಂದ ಮಳೆಯ ಪ್ರಮಾಣ ಕಡಿಮೆಯಾಗಿ 20 ರಿಂದ ಒಣಹವೆ ಆವರಿಸುವ ಲಕ್ಷಣಗಳಿವೆ

ಮಲೆನಾಡು : ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಮಳೆ ಹಾಗೂ ಉಳಿದ ಭಾಗಗಳಲ್ಲಿ ಮತ್ತು ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಒಳನಾಡು: ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ನವೆಂಬರ್ 18 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.

ನವೆಂಬರ್ 21 ಅಥವಾ 22ರ ಸುಮಾರಿಗೆ ಉತ್ತರ ಸುಮಾತ್ರ ಕರಾವಳಿಯಲ್ಲಿ ಹಾಗೂ ಶ್ರೀಲಂಕಾದ ನೈರುತ್ಯ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಆರಂಭವಾಗುವ ಲಕ್ಷಣಗಳಿವೆ. ಇದರ ಪರಿಣಾಮವನ್ನು ಕಾದು ನೋಡಬೇಕಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror