18.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ನವೆಂಬರ್ 18ರಿಂದ ಮಳೆಯ ಪ್ರಮಾಣ ಕಡಿಮೆಯಾಗಿ 20 ರಿಂದ ಒಣಹವೆ ಆವರಿಸುವ ಲಕ್ಷಣಗಳಿವೆ
ಮಲೆನಾಡು : ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಮಳೆ ಹಾಗೂ ಉಳಿದ ಭಾಗಗಳಲ್ಲಿ ಮತ್ತು ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಒಳನಾಡು: ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ನವೆಂಬರ್ 18 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.
ನವೆಂಬರ್ 21 ಅಥವಾ 22ರ ಸುಮಾರಿಗೆ ಉತ್ತರ ಸುಮಾತ್ರ ಕರಾವಳಿಯಲ್ಲಿ ಹಾಗೂ ಶ್ರೀಲಂಕಾದ ನೈರುತ್ಯ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಆರಂಭವಾಗುವ ಲಕ್ಷಣಗಳಿವೆ. ಇದರ ಪರಿಣಾಮವನ್ನು ಕಾದು ನೋಡಬೇಕಾಗಿದೆ.
ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…
ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…
ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …
ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿ ಹಲವು ಮಹತ್ವದ ನಿರ್ಧಾರಗಳನ್ನು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ವರ್ಷದಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿರುವುರಿಂದ, ಪಾರಂಪರಿಕ ಮಾಗಿ…