Advertisement
ವೆದರ್ ಮಿರರ್

ಹವಾಮಾನ ವರದಿ | 16-08-2025 | ಮಲೆನಾಡು-ಕರಾವಳಿಯಲ್ಲಿ ಉತ್ತಮ ಮಳೆ | ಆ.20 ರ ನಂತರ ಮಳೆ ಹೇಗೆ..?

Share

17.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು.  ಈಗಿನಂತೆ ಆಗಸ್ಟ್ 20ರ ತನಕ ಮಳೆಯ ಮುನ್ಸೂಚನೆ ಇದೆ. ನಂತರ ಕಡಿಮೆಯಾಗಿ ಮೋಡ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ. 25 ರಿಂದ ಸಾಮಾನ್ಯ ಮಳೆ ಆರಂಭವಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಆಗಸ್ಟ್ 18 ಹಾಗೂ 19ರಂದು ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿರುವ ಸಾಧ್ಯತೆಗಳಿವೆ. 21ರಿಂದ ಮೋಡ ಹಾಗೂ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಉಳಿದ ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಚಾಮರಾಜನಗರ ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸ್ವಲ್ಪ ಹೆಚ್ಚಿರಬಹುದು.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ, ಒಡಿಶಾ ಕರಾವಳಿಯಲ್ಲಿ ಇದ್ದು, ಆಗಸ್ಟ್ 20,21 ರಂದು ಗುಜರಾತ್ ತಲಪುವ ನಿರೀಕ್ಷೆಯಿದೆ. ಈ ಮಧ್ಯೆ ಮುಂಬೈ ಕಡಲ ತೀರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಆಗಸ್ಟ್ 20ರ ತನಕ ಮುಂಬೈ ಸೇರಿದಂತೆ ಮಹಾರಾಷ್ಟ್ರ ಕರಾವಳಿಯಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

12 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

12 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

13 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

13 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

1 day ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

2 days ago