17.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು. ಈಗಿನಂತೆ ಆಗಸ್ಟ್ 20ರ ತನಕ ಮಳೆಯ ಮುನ್ಸೂಚನೆ ಇದೆ. ನಂತರ ಕಡಿಮೆಯಾಗಿ ಮೋಡ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ. 25 ರಿಂದ ಸಾಮಾನ್ಯ ಮಳೆ ಆರಂಭವಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಆಗಸ್ಟ್ 18 ಹಾಗೂ 19ರಂದು ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿರುವ ಸಾಧ್ಯತೆಗಳಿವೆ. 21ರಿಂದ ಮೋಡ ಹಾಗೂ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಉಳಿದ ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಚಾಮರಾಜನಗರ ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸ್ವಲ್ಪ ಹೆಚ್ಚಿರಬಹುದು.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ, ಒಡಿಶಾ ಕರಾವಳಿಯಲ್ಲಿ ಇದ್ದು, ಆಗಸ್ಟ್ 20,21 ರಂದು ಗುಜರಾತ್ ತಲಪುವ ನಿರೀಕ್ಷೆಯಿದೆ. ಈ ಮಧ್ಯೆ ಮುಂಬೈ ಕಡಲ ತೀರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಆಗಸ್ಟ್ 20ರ ತನಕ ಮುಂಬೈ ಸೇರಿದಂತೆ ಮಹಾರಾಷ್ಟ್ರ ಕರಾವಳಿಯಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…