Advertisement
ಸುದ್ದಿಗಳು

ಹವಾಮಾನ ವರದಿ | 01-08-2024 | ರಾಜ್ಯದಾದ್ಯಂತ ಸಾಮಾನ್ಯ ಮಳೆ | ಆ.3 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

Share

02.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಮತ್ತು ಧರ್ಮಸ್ಥಳ, ಚಾರ್ಮಾಡಿ ಸುತ್ತಮುತ್ತ ಭಾಗಗಳಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಕೊಡಗು, ಹಾಸನ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಮೈಸೂರು, ಚಾಮರಾಜನಗರ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆಉಳಿದ ಕರ್ನಾಟಕದ ಹೆಚ್ಚಿನ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗಿನಂತೆ  ಆ.3ರಿಂದ ಕರಾವಳಿ, ಮಲೆನಾಡು ಸೇರಿದಂತೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿದ್ದು, ಆ. 6 ಅಥವಾ 7 ರಿಂದ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ (ಗುಡುಗು ಸಾಧ್ಯತೆ ಇದೆ). ಹಿಂದೂಮಹಾಸಾಗರ ಹಾಗೂ ದಕ್ಷಿಣ ಅರಬ್ಬಿ ಸಮುದ್ರದಲ್ಲಿ ಮುಂಗಾರು ಮಾರುತಗಳ ಚಲನೆ ಮಂದವಾಗಿದೆ. ಪರಿಣಾಮ ಕಾದು ನೋಡಬೇಕು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

17 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

1 day ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

2 days ago