03. 08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಅವಧಿಯ ಅಥವಾ ನಿರಂತರವಾಗಿ ಸಾಮಾನ್ಯ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಈಗಿನಂತೆ ಈ ಸಾಮಾನ್ಯ ಮಳೆಯು ಆಗಸ್ಟ್ 6ರ ವರೆಗೆ ಮುಂದುವರಿಯುವ ಮುನ್ಸೂಚನೆ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಮಲೆನಾಡು ಭಾಗಗಳಲ್ಲಿಯೂ ಆಗಸ್ಟ್ 6 ರ ತನಕ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ತುಂತುರು ಹಾಗೂ ಕೆಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಆಗಸ್ಟ್ 7ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುತ್ತಿದ್ದಂತಯೇ ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ವಿಧಾತ್ರಿ ಎಂ, 6 ನೇ ತರಗತಿ, ರೋಟರಿ ಮಿಡ್ಟೌನ್ ಶಾಲೆ, ಮೈಸೂರು | …
ನೈನಿಕಾ.ಬಿ.ಸಿ , 4ನೇ ತರಗತಿ , ಸೈಂಟ್ ಆನ್ಸ್ ಇಂಗ್ಲಿಷ್ ಮಾಧ್ಯಮ ಶಾಲೆ,…
ನಯೋನಿಕಾ.ಬಿ.ಸಿ., 4 ನೇ ತರಗತಿ, ಸೈಂಟ್ ಆನ್ಸ್ ಶಾಲೆ ಕಡಬ | -…
ನಿಪಾ ವೈರಸ್ ಹರಡುವಿಕೆಯ ವಿರುದ್ಧ ರಾಜ್ಯವು ತನ್ನ ತಡೆಗಟ್ಟುವ ಕ್ರಮಗಳನ್ನು ತೀವ್ರಗೊಳಿಸಿದೆ ಎಂದು…
ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ದೇವರು ಹಾಗೂ ಗುರು…
ಇಂದ್ರಿಯ ನಿಗ್ರಹವನ್ನೊಳಗೊಂಡ ಬ್ರಹ್ಮಚರ್ಯವು ಕೇವಲ ಬಾಲ್ಯಕಾಲದ ನಿಬಂಧನೆಯಲ್ಲ. ಅದು ಅವಿವಾಹಿತರಿಗಷ್ಟೇ ಅಲ್ಲ, ವಿವಾಹಿತರಿಗೂ…