ಹವಾಮಾನ ವರದಿ | 07-08-2024 | ರಾಜ್ಯದಲಿ ಕೆಲವು ಕಡೆ ಸಾಮಾನ್ಯ ಮಳೆ | ತಗ್ಗಿದ ಮಳೆಯ ಪ್ರಮಾಣ |

August 7, 2024
11:04 AM
ಮುಂಗಾರು ದುರ್ಬಲಗೊಳ್ಳುತ್ತಿದೆ. ಈಗಿನಂತೆ ಆಗಸ್ಟ್ 12 ಅಥವಾ 13ರ ಹೊತ್ತಿಗೆ ಭಾರತದ ಪಶ್ಚಿಮ ಕರಾವಳಿಯಾದ್ಯಂತ ಮುಂಗಾರು ದುರ್ಬಲಗೊಳ್ಳಲಿದೆ. ಆಗಸ್ಟ್ 8 ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಅಲ್ಲಲ್ಲಿ ತುಂತುರು ಮಳೆಗೆ ಸೀಮಿತವಾಗುವ ಲಕ್ಷಣಗಳಿವೆ.

08.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮೋಡದ ವಾತಾವರಣದ ಮುನ್ಸೂಚೆನೆ ಇದೆ ಕರಾವಳಿ ತೀರ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. (ಮುನ್ಸೂಚನೆಯಲ್ಲಿ ಉಡುಪಿ – ದಕ್ಷಿಣ ಕನ್ನಡ ಗಡಿ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ನಿರೀಕ್ಷಿತ ಮಟ್ಟದಲ್ಲಿ ಮಳೆಯ ಸಾಧ್ಯತೆ ಕಡಿಮೆ ಇರಬಹುದು)

ಕೊಡಗು, ಹಾಸನ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದರೂ ಮಧ್ಯಾಹ್ನ ನಂತರ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಗದಗ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.

ಮುಂಗಾರು ದುರ್ಬಲಗೊಳ್ಳುತ್ತಿದೆ. ಈಗಿನಂತೆ ಆಗಸ್ಟ್ 12 ಅಥವಾ 13ರ ಹೊತ್ತಿಗೆ ಭಾರತದ ಪಶ್ಚಿಮ ಕರಾವಳಿಯಾದ್ಯಂತ ಮುಂಗಾರು ದುರ್ಬಲಗೊಳ್ಳಲಿದೆ. ಆಗಸ್ಟ್ 8 ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಅಲ್ಲಲ್ಲಿ ತುಂತುರು ಮಳೆಗೆ ಸೀಮಿತವಾಗುವ ಲಕ್ಷಣಗಳಿವೆ. ಭಾರಿ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಉತ್ತರ ಹಾಗೂ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಇಳುವರಿ ಕುಸಿತ | ಮಿಶ್ರ ತೋಟಗಳಲ್ಲಿ ಹೆಚ್ಚು ಸಮಸ್ಯೆ…! ಯಾವ ತಳಿ ಆಯ್ಕೆ ಮಾಡಿದ್ದಾರೆ…? | ಅಡಿಕೆ ಇಳುವರಿ ಕುಸಿತದ ವಿಶ್ಲೇಷಣೆ
March 13, 2026
10:48 AM
by: ದ ರೂರಲ್ ಮಿರರ್.ಕಾಂ
ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ
March 13, 2026
6:48 AM
by: ಮಿರರ್‌ ಡೆಸ್ಕ್
ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror