15.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. (ನಿನ್ನೆ ಸುಳ್ಯ ತಾಲೂಕಿನ ಹಲವು ಭಾಗಗಳಲ್ಲಿ ಮತ್ತು ಕಡಬ ತಾಲೂಕಿನ ಕೆಲವು ಭಾಗಗಳಲ್ಲಿ ಮೇಘ ಸ್ಪೋಟದಂತಹ ಮಳೆಯಾಗಿತ್ತು. ಇವತ್ತು ಆ ರೀತಿಯ ಮಳೆಯ ಸಾಧ್ಯತೆ ಕಡಿಮೆ ಇರಬಹುದು)
ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮೂಡಿಗೆರೆ, ಕುದುರೆಮುಖ, ಬಾಳೆಹೊನ್ನೂರು, ಶಿೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಮೈಸೂರು, ಚಾಮರಾಜನಗರದ ಕೊಳ್ಳೇಗಾಲ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬಳ್ಳಾರಿ, ಗದಗ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಆಗಸ್ಟ್ 15ರಿಂದ ಮುಂದಿನ 10 ದಿನಗಳವರೆಗೂ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚೆನೆ ಇದೆ. ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗಗಳಲ್ಲಿ ಜಾಸ್ತಿ ಇರಬಹುದು.
ಮುಂಗಾರು ಮತ್ತಷ್ಟು ದುರ್ಬಲಗೊಳ್ಳತ್ತಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ ತಿಂಗಳಲ್ಲಿ…
ದ ರೂರಲ್ ಮಿರರ್.ಕಾಂ ನಲ್ಲಿ "ಹೊಸರುಚಿ" ಯ ಮೂಲಕ ಹಲಸು ಅಡುಗೆಯ ಮೂಲಕ…
ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ…
ವಿಶ್ವದಲ್ಲಿ ಅಡಿಕೆ ಉತ್ಪಾದನೆ ಆಗುವ ಎಲ್ಲಾ ರಾಷ್ಟ್ರಗಳಲ್ಲಿ ಅದರ ಬಳಕೆಯೂ ಆಗುತ್ತಿದೆ.ಇದರೊಂದಿಗೆ ಈ…
ಪ್ಲಾಸ್ಟಿಕ್ ಮಾಲಿನ್ಯವು ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ…
ವಿಯೆಟ್ನಾಂ 2030 ರ ವೇಳೆಗೆ ಕೃಷಿಯಲ್ಲಿ ಹೊರಸೂಸುವ ಮೀಥೇನ್ ಅನ್ನು 30% ರಷ್ಟು…