Advertisement
ಸುದ್ದಿಗಳು

ಹವಾಮಾನ ವರದಿ | 14-08-2024 | ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ |

Share

15.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. (ನಿನ್ನೆ ಸುಳ್ಯ ತಾಲೂಕಿನ ಹಲವು ಭಾಗಗಳಲ್ಲಿ ಮತ್ತು ಕಡಬ ತಾಲೂಕಿನ ಕೆಲವು ಭಾಗಗಳಲ್ಲಿ ಮೇಘ ಸ್ಪೋಟದಂತಹ ಮಳೆಯಾಗಿತ್ತು. ಇವತ್ತು ಆ ರೀತಿಯ ಮಳೆಯ ಸಾಧ್ಯತೆ ಕಡಿಮೆ ಇರಬಹುದು)

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮೂಡಿಗೆರೆ, ಕುದುರೆಮುಖ, ಬಾಳೆಹೊನ್ನೂರು, ಶಿೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಮೈಸೂರು, ಚಾಮರಾಜನಗರದ ಕೊಳ್ಳೇಗಾಲ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬಳ್ಳಾರಿ, ಗದಗ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಆಗಸ್ಟ್ 15ರಿಂದ ಮುಂದಿನ 10 ದಿನಗಳವರೆಗೂ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚೆನೆ ಇದೆ. ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗಗಳಲ್ಲಿ ಜಾಸ್ತಿ ಇರಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

6 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

19 hours ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

19 hours ago

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…

19 hours ago

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

20 hours ago

ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…

20 hours ago