16.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ(ಚಿಕ್ಕೋಡಿ ಸಾಧ್ಯತೆ ಕಡಿಮೆ), ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ, ವಿಜಯಪುರ, ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲಾ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಆಗಸ್ಟ್ 16ರಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 17ರಿಂದ ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿವೆ. ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…