26.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯಲ್ಲಿ ಮೋಡ ಹಾಗೂ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚೆನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ದಾವಣಗೆರೆ ಒಂದೆರಡು ಕಡೆ, ಯಾದಗಿರಿ, ಕಲಬುರ್ಗಿ, ಬೀದರ್ ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಉತ್ತರ ಭಾರತದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದಂತಹ ತಿರುವಿಕೆಯು ಮಧ್ಯಪ್ರದೇಶದಿಂದ ಪಶ್ಚಿಮಕ್ಕೆ ಚಲಿಸುತ್ತಿದ್ದು, ಆಗಸ್ಟ್ 28 ರಂದು ಉತ್ತರ ಗುಜರಾತ್ ಮೂಲಕ ಅರಬ್ಬಿ ಸಮುದ್ರ ಸೇರುವ ಲಕ್ಷಣಗಳಿವೆ. ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಆಗಸ್ಟ್ ಕೊನೆಯ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ. ರಾಜ್ಯದ ಒಳನಾಡು ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಹೊರತುಪಡಿಸಿ ಜೋರು ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…