Advertisement
ವೆದರ್ ಮಿರರ್

ಹವಾಮಾನ ವರದಿ | 25-08-2024 | ರಾಜ್ಯದ ಹಲವು ಕಡೆ ಸಾಮಾನ್ಯ ಮಳೆ | ಭಾರೀ ಮಳೆಯ ಲಕ್ಷಣಗಳು ಸದ್ಯಕ್ಕಿಲ್ಲ |

Share

26.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯಲ್ಲಿ ಮೋಡ ಹಾಗೂ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚೆನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.

ದಾವಣಗೆರೆ ಒಂದೆರಡು ಕಡೆ, ಯಾದಗಿರಿ, ಕಲಬುರ್ಗಿ, ಬೀದರ್ ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.

ಈಗಿನಂತೆ ಉತ್ತರ ಭಾರತದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದಂತಹ ತಿರುವಿಕೆಯು ಮಧ್ಯಪ್ರದೇಶದಿಂದ ಪಶ್ಚಿಮಕ್ಕೆ ಚಲಿಸುತ್ತಿದ್ದು, ಆಗಸ್ಟ್ 28 ರಂದು ಉತ್ತರ ಗುಜರಾತ್ ಮೂಲಕ ಅರಬ್ಬಿ ಸಮುದ್ರ ಸೇರುವ ಲಕ್ಷಣಗಳಿವೆ. ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಆಗಸ್ಟ್ ಕೊನೆಯ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ. ರಾಜ್ಯದ ಒಳನಾಡು ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಹೊರತುಪಡಿಸಿ ಜೋರು ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

11 hours ago

ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…

11 hours ago

ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ

ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…

12 hours ago

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…

21 hours ago

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

1 day ago

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!

ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…

1 day ago