ಹವಾಮಾನ ವರದಿ | 01-09-2024 | ಕೆಲವು ಕಡೆ ಸಾಮಾನ್ಯ, ಕೆಲವು ಕಡೆ ಉತ್ತಮ ಮಳೆ | ಸೆ.2ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯ ಲಕ್ಷಣ |

September 1, 2024
1:22 PM

02.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಧಾರಣ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಸ್ವಲ್ಪ ಜಾಸ್ತಿ ಇರಬಹುದು. ಕೊಡಗು, ಹಾಸನ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಜೊತೆಗೆ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಬಳ್ಳಾರಿ, ವಿಜಯಪುರ, ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ.
ಚಿತ್ರದುರ್ಗ ಉತ್ತರ, ದಾವಣಗೆರೆ, ಕೊಪ್ಪಳ, ರಾಯಚೂರು, ಗದಗ, ಬಾಗಲಕೋಟೆ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.  ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸ್ವಲ್ಪ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.

ಅರಬ್ಬಿ ಸಮುದ್ರದ ಆಸ್ನಾ ಚಂಡಮಾರುತವು ದುರ್ಬಲಗೊಳ್ಳುತ್ತಿದ್ದು, ಇಂದು ರಾತ್ರಿ ಮಸ್ಕತ್ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಈಗಾಗಲೇ ಆಂದ್ರಾ ಪ್ರವೇಶಿಸಿದ್ದು, ಆಂದ್ರಾ, ತೆಲಂಗಾಣ ಹಾಗೂ ಕರ್ನಾಟಕದ ಉತ್ತರ ಒಳನಾಡು ಭಾಗಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಈಗಿನಂತೆ ಸೆಪ್ಟೆಂಬರ್ 2ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಆದರೆ ರಾಜ್ಯದ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?
October 3, 2026
10:46 AM
by: ದ ರೂರಲ್ ಮಿರರ್.ಕಾಂ
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ
ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌
October 3, 2026
10:00 AM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ
October 3, 2026
9:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror