Advertisement
ಸುದ್ದಿಗಳು

ಹವಾಮಾನ ವರದಿ | 15-08-2025 | ಸದ್ಯ ಸಾಮಾನ್ಯ ಮಳೆ, ಆ.20 ರ ನಂತರ ಮಳೆ ಕಡಿಮೆ

Share

16.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬಿಡುವಿನ ಸಮಯ ಸ್ವಲ್ಪ ಹೆಚ್ಚಿರಬಹುದು. ಈಗಿನಂತೆ ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಗಸ್ಟ್ 20 ರ ತನಕವೂ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ನಂತರ ಮೋಡ ಹಾಗೂ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಈಗಿನಂತೆ ಆಗಸ್ಟ್ 19 ರ ತನಕವೂ ಮಳೆಯ ಮುನ್ಸೂಚನೆ ಇದೆ. 18 ಹಾಗೂ 19ರಂದು ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿರಬಹುದು. ನಂತರ ಮೋಡ ಹಾಗೂ ಬಿಸಿಲಿನ ವಾತಾವರಣದ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಬೀದರ್ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ವಿಜಯಪುರ, ವಿಜಯನಗರ, ದಾವಣಗೆರೆ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.  ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡಿನಲ್ಲಿ ಆಗಸ್ಟ್ 20ರ ತನಕ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಆಗಸ್ಟ್ 19ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ. ಆಗಸ್ಟ್ 19 ಹಾಗೂ 20ರಂದು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು ಪ್ರಭಲಗೊಂಡು ಮಧ್ಯಪ್ರದೇಶ, ಮಹಾರಾಷ್ಟ್ರ ರಾಜ್ಯಗಳಲ್ಲಿ ಸಾಗಿ ಆಗಸ್ಟ್ 22,23 ರಂದು ಗುಜರಾತ್ ಗೆ ತಲಪುವ ನಿರೀಕ್ಷೆಯಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

1 hour ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

20 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago