ಹವಾಮಾನ ವರದಿ | 10.10.2024 | ಸಾಮಾನ್ಯ ಮಳೆಯ ಮುನ್ಸೂಚನೆ | ವಾಯುಭಾರ ಕುಸಿತದ ಪ್ರಭಾವ ಹೆಚ್ಚುತ್ತಿದೆ |

October 10, 2024
1:52 PM
ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಇದ್ದರೂ, ವಾಯುಭಾರ ಕುಸಿತಗಳ ಪರಿಣಾಮ ನೋಡಬೇಕಾಗಿದೆ.

11.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡದ ಬೆಳಗಾವಿ, ಧಾರವಾಡ, ಶಿವಮೊಗ್ಗ ಗಡಿ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಮಂಗಳೂರು, ಉಡುಪಿ ತೀರ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಈಗಿನಂತೆ ಮುಂದಿನ 10 ದಿನಗಳವರೆಗೂ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದರೂ ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕಾದು ನೋಡಬೇಕಾಗಿದೆ.

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಆದರೆ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ಅನಿರೀಕ್ಷಿತ ಭಾರಿ ಮಳೆಯು ಮುನ್ಸೂಚನೆಗೆ ಸಿಗುತ್ತಿಲ್ಲ. (ನಿನ್ನೆಯ ರೀತಿ).
ಈಗಿನಂತೆ ವಾಯುಭಾರ ಕುಸಿತಗಳ ಪರಿಸ್ಥಿತಿ ಅವಲೋಕಿಸಬೇಕಿದೆ.

ಉತ್ತರ ಒಳನಾಡಿನ ಕೊಪ್ಪಳ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಹಾವೇರಿ, ಧಾರವಾಡ, ಬೆಳಗಾವಿ ( ಅಥಣಿ ಸಹಿತ), ಬಾಗಲಕೋಟೆ, ಗದಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಗುಡುಗಿನೊಂದಿಗೆ ಉತ್ತಮ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ (ಕೊಳ್ಳೇಗಾಲ ಭಾಗಗಳಲ್ಲಿ), ಮಂಡ್ಯ ಜಿಲ್ಲೆಗಳಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಇದ್ದರೂ, ವಾಯುಭಾರ ಕುಸಿತಗಳ ಪರಿಣಾಮ ನೋಡಬೇಕಾಗಿದೆ.

Advertisement

ಈಗಾಗಲೇ ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಸ್ವಲ್ಪ ಪ್ರಭಲವಾಗುವ ಸಾಧ್ಯತೆ ಇದೆ ಮತ್ತು ಅದು ಪಶ್ಚಿಮಾಭಿಮುಖವಾಗಿ ಚಲಿಸಿ ಅ. 13ರ ಸುಮಾರಿಗೆ ಓಮನ್ ಕರಾವಳಿಗೆ ತಲಪುವ ನಿರೀಕ್ಷೆಯಿದೆ. ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 18-05-2025 | ಮೇ.19 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸೂಚನೆ | ನಿರೀಕ್ಷೆಗೂ ಮುನ್ನವೇ ಮುಂಗಾರು ನಿರೀಕ್ಷೆ |
May 18, 2025
2:42 PM
by: ಸಾಯಿಶೇಖರ್ ಕರಿಕಳ
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ | ಈ ವರ್ಷ ಅದೃಷ್ಟವೋ ಅದೃಷ್ಟ!
May 18, 2025
10:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮ
May 18, 2025
8:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ
May 17, 2025
10:22 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group