ಹವಾಮಾನ ವರದಿ | 23-06-2025 | ಜೂ.29 ರಿಂದ ಬೆಳೆಗಳಿಗೆ ಔಷಧಿ ಸಿಂಪಡಣೆಗೆ ಅವಕಾಶ ಸಿಗಬಹುದೇ..? | ಜೂನ್ ಕೊನೆಯಲ್ಲಿ ಮುಂಗಾರು ದುರ್ಬಲಗೊಳ್ಳಬಹುದಾ..?

June 23, 2025
1:26 PM
ಈಗಿನಂತೆ ಜೂನ್ 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ತೋಟಗಳಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು.ಜೂನ್ ಕೊನೆಯಲ್ಲಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆಗಳಿವೆ.

24.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಮಧ್ಯಾಹ್ನ ನಂತರ ಮಳೆ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿವೆ. ಈಗಿನಂತೆ ಜೂನ್ 28ರ ತನಕ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, 29 ರಿಂದ ಬೆಳೆಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು. ಈಗಿನಂತೆ ಜೂನ್ 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ತೋಟಗಳಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು. ಈಗಿನಂತೆ ಜೂನ್ 25 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಕರಾವಳಿ ಜೆಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಜೂನ್ ಕೊನೆಯಲ್ಲಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆಗಳಿವೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ದೇಶದಾದ್ಯಂತ ಸಾಮಾನ್ಯ ಮಳೆ | ಮಲೆನಾಡು-ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ
July 16, 2025
7:51 AM
by: ದ ರೂರಲ್ ಮಿರರ್.ಕಾಂ
ಆರೋಗ್ಯದಲ್ಲಿ ಈ ರಾಶಿಯವರಿಗೆ ದೀರ್ಘಕಾಲದ ಕಾಯಿಲೆಯಿಂದ ಚೇತರಿಕೆ
July 16, 2025
7:17 AM
by: ದ ರೂರಲ್ ಮಿರರ್.ಕಾಂ
ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ
July 15, 2025
9:39 PM
by: ದ ರೂರಲ್ ಮಿರರ್.ಕಾಂ
ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ
July 15, 2025
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror