24.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಮಧ್ಯಾಹ್ನ ನಂತರ ಮಳೆ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿವೆ. ಈಗಿನಂತೆ ಜೂನ್ 28ರ ತನಕ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, 29 ರಿಂದ ಬೆಳೆಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು. ಈಗಿನಂತೆ ಜೂನ್ 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ತೋಟಗಳಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು.
ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು. ಈಗಿನಂತೆ ಜೂನ್ 25 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಕರಾವಳಿ ಜೆಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಜೂನ್ ಕೊನೆಯಲ್ಲಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆಗಳಿವೆ.
2026ರ ಎಲ್‌ನಿನೋ ಪರಿಣಾಮದಿಂದ ಮುಂಗಾರು ಮತ್ತು ಹಿಂಗಾರು ದುರ್ಬಲಗೊಂಡಿರುವ ಹಿನ್ನೆಲೆಯಲ್ಲಿ ಮೇ 2027ರವರೆಗೆ…
ಅಸ್ಸಾಂನ ಬರಾಕ್ ಕಣಿವೆಯ ಕಟಿಗೋರಾ ಭಾಗದಲ್ಲಿ ಸ್ಥಳೀಯ ಅಡಿಕೆ ಸಾಗಣೆಗೆ ಸಿಂಡಿಕೇಟ್ ಅಡ್ಡಿಪಡಿಸುತ್ತಿದೆ…
ಕರ್ನಾಟಕದಾದ್ಯಂತ ಒಣಹವೆ ಮುಂದುವರಿಯಲಿದ್ದು, ಉತ್ತರ ಭಾರತದ ಶೀತ ಹಾಗೂ ಶುಷ್ಕ ಗಾಳಿಯಿಂದ ಚಳಿಯ…
ಮೈಸೂರಿನ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದ ವಿದ್ವತ್ ಪರೀಕ್ಷೆಯಲ್ಲಿ…
ಬಳ್ಳಾರಿಯ ಗೃಹಿಣಿ ಆರ್.ಜೆ. ಸುಜಾತ ಅವರು ಮನೆಯ ತಾರಸಿಯಲ್ಲಿ 150ಕ್ಕೂ ಹೆಚ್ಚು ಸಸ್ಯಗಳನ್ನು…
ಹೋಟೆಲ್‌ಗಳಲ್ಲಿ ಬಳಕೆಯಾದ ಅಡುಗೆ ಎಣ್ಣೆ ಸಂಗ್ರಹಣೆ ಮತ್ತು ವಿಲೇವಾರಿಗೆ ಮೂರು ತಿಂಗಳೊಳಗೆ ಅಧಿಕೃತ…