ಹವಾಮಾನ ವರದಿ | 02-09-2024 | ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ |

September 2, 2024
12:51 PM
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ತೆಲಂಗಾಣದಿಂದ ಮುಂದುವರಿಯುತ್ತಿದ್ದು ಮಹಾರಾಷ್ಟ್ರ ಕಡೆಗೆ ಚಲಿಸುತ್ತಿದೆ. ಇದರ ಪರಿಣಾಮದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು , ರಾಜ್ಯದ ಕರಾವಳಿ ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

03.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮೋಡಗಳ ಚಲನೆ ಆಗ್ನೇಯ ಕಡೆಗೆ ವಾಲಿರುವುದರಿಂದ ಮಡಿಕೇರಿ ಘಾಟಿಯ ಕೆಳಗಿನ ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುತ್ತಿದೆ. ಕೊಡಗು ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದ್ದು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ತೆಲಂಗಾಣದಿಂದ ಮುಂದುವರಿಯುತ್ತಿದ್ದು ಮಹಾರಾಷ್ಟ್ರ ಕಡೆಗೆ ಚಲಿಸುತ್ತಿದೆ. ಇದರ ಪರಿಣಾಮದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು , ರಾಜ್ಯದ ಕರಾವಳಿ ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ಆದರೆ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕ್ಷೀಣಿಸಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!
April 3, 2026
11:59 AM
by: ದ ರೂರಲ್ ಮಿರರ್.ಕಾಂ
ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror