03.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮೋಡಗಳ ಚಲನೆ ಆಗ್ನೇಯ ಕಡೆಗೆ ವಾಲಿರುವುದರಿಂದ ಮಡಿಕೇರಿ ಘಾಟಿಯ ಕೆಳಗಿನ ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುತ್ತಿದೆ. ಕೊಡಗು ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದ್ದು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ತೆಲಂಗಾಣದಿಂದ ಮುಂದುವರಿಯುತ್ತಿದ್ದು ಮಹಾರಾಷ್ಟ್ರ ಕಡೆಗೆ ಚಲಿಸುತ್ತಿದೆ. ಇದರ ಪರಿಣಾಮದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು , ರಾಜ್ಯದ ಕರಾವಳಿ ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ಆದರೆ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕ್ಷೀಣಿಸಲಿದೆ.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…