ಹವಾಮಾನ ವರದಿ | 08-09-2024 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ | ರಾಜ್ಯದ ವಿವಿದೆಡೆ ತುಂತುರು ಮಳೆ |

September 8, 2024
11:55 AM
ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಸೆ.9 ರ ಸಂಜೆ ಅಥವಾ ರಾತ್ರಿ ಉತ್ತರ ಒಡಿಶಾ ಕರಾವಳಿ ಮೂಲಕ ಭೂಭಾಗಕ್ಕೆ ಪ್ರವೇಶಿಸುವ ಸಾಧ್ಯತೆಗಳಿವೆ. ಈ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದಂತೆ, ಅಂದರೆ ಇನ್ನೆರಡು ದಿನಗಳಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗಗಳು ಸೇರಿದಂತೆ ರಾಜ್ಯದಲ್ಲಿ ಮಳೆಯ  ಪ್ರಮಾಣ ಕಡಿಮೆಯಾಗಲಿದೆ.

09.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. ಕೆಲವು ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆಯೂ ಇದೆ. 

ಕೊಡಗು ಕೇರಳ ಹಾಗೂ ಕರ್ನಾಟಕ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಹಾಸನ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದ್ದು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ

ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಸೆಪ್ಟೆಂಬರ್ 9ರ ಸಂಜೆ ಅಥವಾ ರಾತ್ರಿ ಉತ್ತರ ಒಡಿಶಾ ಕರಾವಳಿ ಮೂಲಕ ಭೂಭಾಗಕ್ಕೆ ಪ್ರವೇಶಿಸುವ ಸಾಧ್ಯತೆಗಳಿವೆ. ಈ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದಂತೆ, ಅಂದರೆ ಇನ್ನೆರಡು ದಿನಗಳಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗಗಳು ಸೇರಿದಂತೆ ರಾಜ್ಯದಲ್ಲಿ ಮಳೆಯ  ಪ್ರಮಾಣ ಕಡಿಮೆಯಾಗಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!
March 14, 2026
8:05 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ
March 14, 2026
2:43 PM
by: ಸಾಯಿಶೇಖರ್ ಕರಿಕಳ
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?
March 14, 2026
7:21 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror