09.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. ಕೆಲವು ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆಯೂ ಇದೆ.
ಕೊಡಗು ಕೇರಳ ಹಾಗೂ ಕರ್ನಾಟಕ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಹಾಸನ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದ್ದು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ
ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಸೆಪ್ಟೆಂಬರ್ 9ರ ಸಂಜೆ ಅಥವಾ ರಾತ್ರಿ ಉತ್ತರ ಒಡಿಶಾ ಕರಾವಳಿ ಮೂಲಕ ಭೂಭಾಗಕ್ಕೆ ಪ್ರವೇಶಿಸುವ ಸಾಧ್ಯತೆಗಳಿವೆ. ಈ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದಂತೆ, ಅಂದರೆ ಇನ್ನೆರಡು ದಿನಗಳಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗಗಳು ಸೇರಿದಂತೆ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…