ಹವಾಮಾನ ವರದಿ | 06-08-2024 | ಕರಾವಳಿ ಜಿಲ್ಲೆಯಲ್ಲಿ ಸಾಮಾನ್ಯ ಮಳೆ ನಿರಂತರ | ಇನ್ನೂ 2 ದಿನಗಳ ಕಾಲ ಮಳೆ ಮುಂದುವರಿಯುವ ಲಕ್ಷಣ |

August 6, 2024
12:07 PM
ದಕ್ಷಿಣ ಅರಬ್ಬಿ ಸಮುದ್ರದಲ್ಲಿ ಮುಂಗಾರು ಈಗಾಗಲೇ ದುರ್ಬಲಗೊಂಡಿದ್ದರೂ, ಗಾಳಿಯು ವಾಯವ್ಯದಿಂದ ಆಗ್ನೇಯಕ್ಕೆ ಚಲಿಸುತ್ತಿರುವುದರಿಂದ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆಯು ಇನ್ನೂ 2 ದಿನಗಳ ಕಾಲ ಮುಂದುವರಿಯುವ ಲಕ್ಷಣಗಳಿವೆ. ಆಗಸ್ಟ್ 8 ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. ಆದರೆ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.

07.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ (ನಿರಂತರ) ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಕೊಡಗು ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ (ನಿರಂತರ) ಮುಂದುವರಿಯುವ ಮುನ್ಸೂಚನೆ ಇದೆ.

ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ, ಕೋಲಾರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಹೆಚ್ಚಿನ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಉತ್ತರ ಭಾರತದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುವಿಕೆಯು ರಾಜಸ್ಥಾನದ ಉತ್ತರ ಭಾಗಕ್ಕೆ ತಲುಪಿದ್ದು ಇವತ್ತು ಶಿಥಿಲಗೊಳ್ಳುವ ಲಕ್ಷಣಗಳಿವೆ. ದಕ್ಷಿಣ ಅರಬ್ಬಿ ಸಮುದ್ರದಲ್ಲಿ ಮುಂಗಾರು ಈಗಾಗಲೇ ದುರ್ಬಲಗೊಂಡಿದ್ದರೂ, ಗಾಳಿಯು ವಾಯವ್ಯದಿಂದ ಆಗ್ನೇಯಕ್ಕೆ ಚಲಿಸುತ್ತಿರುವುದರಿಂದ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆಯು ಇನ್ನೂ 2 ದಿನಗಳ ಕಾಲ ಮುಂದುವರಿಯುವ ಲಕ್ಷಣಗಳಿವೆ. ಆಗಸ್ಟ್ 8 ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. ಆದರೆ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ
October 16, 2026
3:13 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ
October 16, 2026
2:48 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ
October 15, 2026
10:10 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror