07.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ (ನಿರಂತರ) ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಕೊಡಗು ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ (ನಿರಂತರ) ಮುಂದುವರಿಯುವ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ, ಕೋಲಾರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಹೆಚ್ಚಿನ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉತ್ತರ ಭಾರತದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುವಿಕೆಯು ರಾಜಸ್ಥಾನದ ಉತ್ತರ ಭಾಗಕ್ಕೆ ತಲುಪಿದ್ದು ಇವತ್ತು ಶಿಥಿಲಗೊಳ್ಳುವ ಲಕ್ಷಣಗಳಿವೆ. ದಕ್ಷಿಣ ಅರಬ್ಬಿ ಸಮುದ್ರದಲ್ಲಿ ಮುಂಗಾರು ಈಗಾಗಲೇ ದುರ್ಬಲಗೊಂಡಿದ್ದರೂ, ಗಾಳಿಯು ವಾಯವ್ಯದಿಂದ ಆಗ್ನೇಯಕ್ಕೆ ಚಲಿಸುತ್ತಿರುವುದರಿಂದ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆಯು ಇನ್ನೂ 2 ದಿನಗಳ ಕಾಲ ಮುಂದುವರಿಯುವ ಲಕ್ಷಣಗಳಿವೆ. ಆಗಸ್ಟ್ 8 ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. ಆದರೆ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…