ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಇಳಿಮುಖ

June 18, 2025
10:43 PM

ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಅಬ್ಬರಿಸಿದ್ದ ಮಳೆ ಇಂದು ಇಳಿಮುಖವಾಗಿದೆ. ಕರಾವಳಿ ಕರ್ನಾಟಕದಲ್ಲಿ ಎಲ್ಲೊ ಅಲರ್ಟ್ ಘೋಷಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಇಂದು ಮಳೆಯ ಅಬ್ಬರ ಕಡಿಮೆಯಾಗಿದೆ. ಎರಡು ದಿನಗಳಿಂದ ರಜೆ ನೀಡಲ್ಪಟ್ಟಿದ್ದ ಶಿಕ್ಷಣ ಸಂಸ್ಥೆಗಳು ಇಂದು ಪುನರಾರಂಭಗೊಂಡಿದೆ. ಮೂರು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಕಾವೇರಿ, ಲಕ್ಷ್ಮಣತೀರ್ಥ ನದಿಗಳು ತುಂಬಿ ಹರಿಯುತ್ತಿದ್ದು  ನದಿಪಾತ್ರದ  ಹೊಲಗದ್ದೆಗಳು  ಜಲಾವೃತಗೊಂಡಿವೆ.ಹಾರಂಗಿ ಜಲಾನಯನ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿರುವುದರಿಂದಾಗಿ ಹಾರಂಗಿ ಜಲಾಶಯಕ್ಕೆ ನೀರಿನ ಹರಿವು ಹೆಚ್ಚಳವಾಗಿದ್ದು, 7 ಸಾವಿರದ 888 ಕ್ಯೂಸೆಕ್ ಒಳಹರಿವಿದೆ. ಜಲಾಶಯದಿಂದ ನದಿಗೆ 12 ಸಾವಿರದ 166 ಕ್ಯೂಸೆಕ್ ನೀರನ್ನು ಹೊರಬಿಡಲಾಗಿದೆ. 2 ಸಾವಿರದ 859 ಅಡಿ ಗರಿಷ್ಟ ಸಂಗ್ರಹಣಾ ಸಾಮರ್ಥ್ಯದ ಜಲಾಶಯದಲ್ಲಿಂದು 2 ಸಾವಿರದ 850 ಅಡಿ ನೀರಿನ ಸಂಗ್ರಹವಿದೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 12-07-2025 | ಸಾಮಾನ್ಯ ಮಳೆ ಮುಂದುವರಿಕೆ | ಜು.16 ರಿಂದ ಮಳೆ ಹೆಚ್ಚಳ |
July 12, 2025
1:52 PM
by: ಸಾಯಿಶೇಖರ್ ಕರಿಕಳ
ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ
July 12, 2025
11:32 AM
by: The Rural Mirror ಸುದ್ದಿಜಾಲ
ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ
July 12, 2025
7:56 AM
by: ದ ರೂರಲ್ ಮಿರರ್.ಕಾಂ
ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ
July 12, 2025
7:32 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror